ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಭೀಕರ ರಸ್ತೆ ಅಪಘಾತಕ್ಕೆ ನವವಿವಾಹಿತೆ ಬಲಿ - ಪತಿ ಗಂಭೀರ

ಬಂಟ್ವಾಳ: ಭೀಕರ ರಸ್ತೆ ಅಪಘಾತದಲ್ಲಿ ಎರಡು ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತೆ ಸಾವನ್ನಪ್ಪಿ ಪತಿ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ನಡೆದಿದೆ.

ಪೆರ್ನೆಸಮೀಪದ ಒಡ್ಯದಗಯ ನಿವಾಸಿ ಅನೀಶ್ ಕೃಷ್ಣ ಅವರ ಪತ್ನಿ ಮಾನಸ ಮೃತಪಟ್ಟ ದುರ್ದೈವಿ ನವವಿವಾಹಿತೆ. ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಬಿ.ಸಿ.ರೋಡ್ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವದಂಪತಿ ಸಂಚರಿಸುತ್ತಿದ್ದ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಹಾರಿ ಮತ್ತೊಂದು ಬದಿಯಿಂದ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಮಾನಸ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಸೆಪ್ಟೆಂಬರ್‌ 5ರಂದು ಅನೀಶ್ ಕೃಷ್ಣ ಹಾಗೂ ಮಾನಸ ಅವರ ಮದುವೆ ದೇಂತಡ್ಕ ದೇವಸ್ಥಾನದಲ್ಲಿ ನಡೆದಿತ್ತು. ಮದುವೆ ಹಾಲ್ ಬಾಡಿಗೆಯನ್ನು ನೀಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈ‌ಘಟನೆ ನಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Edited By : Nagesh Gaonkar
PublicNext

PublicNext

07/09/2024 07:01 pm

Cinque Terre

96.17 K

Cinque Terre

7

ಸಂಬಂಧಿತ ಸುದ್ದಿ