ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿನೇಶ್ ಫೋಗಟ್, ಬಜರಂಗ್ ಪುನಿಯಾ ವಿರುದ್ಧ ಮಾತನಾಡಬೇಡಿ - ಬ್ರಿಜ್ ಭೂಷಣ್‌ಗೆ ಬಿಜೆಪಿ ಹೈಕಮಾಂಡ್ ಖಡಕ್ ಸೂಚನೆ

ನವದೆಹಲಿ: ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿರುವ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ವಿರುದ್ಧ ಕಾಮೆಂಟ್ ಮಾಡುವುದನ್ನು ನಿಲ್ಲಿಸುವಂತೆ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಬಿಜೆಪಿ ಹೈಕಮಾಂಡ್ ಖಡಕ್ ಸೂಚನೆ ನೀಡಿದೆ ಎಂದು ವರದಿಗಳು ತಿಳಿಸಿವೆ.

ಬ್ರಿಜ್ ಭೂಷಣ್ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿನೇಶ್ ಮತ್ತು ಬಜರಂಗ್ ಭೂಷಣ್ ಪ್ರತಿಭಟನೆ ನಡೆಸಿದ್ದರು.

ಹರಿಯಾಣದ ಜುಲಾನಾ ವಿಧಾನಸಭಾ ಕ್ಷೇತ್ರದಿಂದ ವಿನೇಶ್‌ ಫೋಗಟ್ ಅವರನ್ನು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪಕ್ಷ ಕಣಕ್ಕಿಳಿಸಿದೆ. ಜತೆಗೆ ಅಖಿಲ ಭಾರತ ಕಿಸಾನ್‌ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷರನ್ನಾಗಿ ಬಜರಂಗ್ ಪೂನಿಯಾ ಅವರನ್ನು ನೇಮಕ ಮಾಡಲಾಗಿದೆ.

Edited By : Vijay Kumar
PublicNext

PublicNext

08/09/2024 05:17 pm

Cinque Terre

138.83 K

Cinque Terre

3

ಸಂಬಂಧಿತ ಸುದ್ದಿ