ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಮುಕ್ತ ಸ್ವಾಗತ - ಎಂ ಬಿ ಪಾಟೀಲ

ಬೆಂಗಳೂರು: ಸಿಂಗಾಪುರದ ಉದ್ಯಮಿಗಳು ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ ಮುಂದೆ ಬಂದರೆ ಅವರಿಗೆ ಅಗತ್ಯವಾಗಿ ಬೇಕಾದ ಭೂಮಿ ಮತ್ತಿತರ ಮೂಲಸೌಕರ್ಯಗಳನ್ನು ಸಮರೋಪಾದಿಯಲ್ಲಿ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಅಲ್ಲಿನ ಉದ್ಯಮಿಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇರಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

'ಸಿಂಗಪುರ್ ಬಿಜಿನೆಸ್ ಫೆಡರೇಶನ್’ನ ಉನ್ನತ ಮಟ್ಟದ ನಿಯೋಗದ ಸದಸ್ಯರೊಂದಿಗೆ ಅವರು ಉನ್ನತ ಮಟ್ಟದ ಮಾತುಕತೆ ನಡೆಸಿದರು. ನಿಯೋಗದೊಂದಿಗೆ ಮಾತನಾಡಿದ ಸಚಿವರು, 2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ 'ಜಾಗತಿಕ ಹೂಡಿಕೆದಾರರ ಸಮಾವೇಶ'ದಲ್ಲಿ ಸಿಂಗಪುರದ ಉದ್ದಿಮೆಗಳು ಭಾಗವಹಿಸಬೇಕು ಎಂದು ಆಹ್ವಾನಿಸಿದರು.

ಮಾತುಕತೆಯ ಸಂದರ್ಭದಲ್ಲಿ ಸಿಂಗಪುರದ ಅಪ್ಲೈಡ್ ಟೋಟಲ್ ಕಂಟ್ರೋಲ್ ಟ್ರೀಟ್ಮೆಂಟ್ ಪಿಟಿಇ ಲಿಮಿಟೆಡ್, ಬಯೋಮೆಡ್ ಸರ್ವೀಸಸ್ ಪಿಟಿಇ ಲಿಮಿಟೆಡ್, ಕೇಟರಿಂಗ್ ಸೊಲ್ಯೂಷನ್ಸ್ ಲಿ, ಹರ್ಮಿಸ್ ಎಪಿಟೆಕ್ ಕಾರ್ಪೊರೇಷನ್, ಇನ್ಸ್ಫಿಯರ್ ಟೆಕ್ನಾಲಜಿ, ರೀಟ್ಜ್ ಲಿಮಿಟೆಡ್, ಯೂನಿವರ್ಸಲ್ ಸಕ್ಸಸ್ ಎಂಟರ್ಪ್ರೈಸಸ್ ಲಿಮಿಟೆಡ್ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ವ್ಯಕ್ತಪಡಿಸಿದವು. ಇದಕ್ಕೆ ಸ್ಪಂದಿಸಿದ ಸಚಿವರು ಭೂಮಿ ಮತ್ತು ಇತರ ಮೂಲಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಫೆಡರೇಷನ್‌ನ ಸದಸ್ಯರು, ಬೆಂಗಳೂರಿನಲ್ಲಿ 'ಸಿಂಗಪುರ ಬಿಜಿನೆಸ್ ಫೆಡರೇಶನ್'ನ ಕಚೇರಿಯನ್ನು ತೆರೆಯಲು ಆಸಕ್ತಿ ಹೊಂದಿರುವುದಾಗಿ ತಿಳಿಸಿದರು. ಅಲ್ಲದೆ, ರಾಜ್ಯ ಸರಕಾರವು ಸಹಕಾರ ನೀಡಿದರೆ ಕರ್ನಾಟಕದಲ್ಲಿ ಸಿಂಗಪುರ್ ಇರುವಂತೆ ಮಾಡಲಾಗುವುದು. ಈ ರೀತಿಯ ಸೌಲಭ್ಯ ಮತ್ತು ಪ್ರಾವೀಣ್ಯ ಹಾಗೂ ಬಂಡವಾಳ ಹೂಡಿಕೆಯ ಶಕ್ತಿ ತಮ್ಮ ಒಕ್ಕೂಟಕ್ಕಿದೆ ಎಂದು ತಿಳಿಸಿದರು.

Edited By : Suman K
PublicNext

PublicNext

09/09/2024 03:23 pm

Cinque Terre

30.15 K

Cinque Terre

0

ಸಂಬಂಧಿತ ಸುದ್ದಿ