ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಬ್ಲಿಕ್ ನೆಕ್ಸ್ಟ್ ಬಿಗ್ ಇಂಪ್ಯಾಕ್ಟ್ - ಬೀದಿ ನಾಯಿಗಳ ಕಾರ್ಯಾಚರಣೆ ಜಿಲ್ಲಾಡಳಿತ ಸೂಚನೆ

ಹುಬ್ಬಳ್ಳಿ: ಹುಬ್ಬಳ್ಳಿ - ಧಾರವಾಡ ಅವಳಿನಗರದ ಜನರಲ್ಲಿ ಭಯ ಹುಟ್ಟಿಸಿ ಓಡಾಡಲು ಕೂಡ ಆತಂಕಗೊಂಡಿದ್ದ ಬೀದಿ ನಾಯಿಗಳ ಹಾವಳಿಗೆ ಜಿಲ್ಲಾಡಳಿತ ಬ್ರೇಕ್ ಹಾಕಲು ಮುಂದಾಗಿದೆ. ಪಬ್ಲಿಕ್ ನೆಕ್ಸ್ಟ್ ನಿರಂತರ ವರದಿಯ ಬೆನ್ನಲ್ಲೇ ಜಿಲ್ಲಾಡಳಿತ ಸೂಕ್ತ ಆದೇಶ ಹೊರಡಿಸಿರುವುದು ಪಬ್ಲಿಕ್ ನೆಕ್ಸ್ಟ್ ಮಾಧ್ಯಮದ ಬಿಗ್ ಇಂಪ್ಯಾಕ್ಟ್ ಆಗಿದೆ.

ಕಳೆದ ಕೆಲವು ದಿನಗಳಿಂದ ನಿಮ್ಮ ಪಬ್ಲಿಕ್ ನೆಕ್ಸ್ಟ್ ಬೀದಿ ನಾಯಿಗಳ ಹಾವಳಿ ಹಾಗೂ ಬೀದಿ ನಾಯಿಗಳಿಂದ ಸಾರ್ವಜನಿಕರು ಅನುಭವಿಸಿದ ಸಂಕಷ್ಟದ ಕುರಿತು ವಿಸ್ತೃತ ವರದಿಗಳನ್ನು ಬಿತ್ತರಿಸುವ ಮೂಲಕ ಜನರ ಅಳಲನ್ನು ಜಿಲ್ಲಾಡಳಿತದ ಗಮನಕ್ಕೆ ತಂದಿತ್ತು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಪಾಲಿಕೆಯ ಅಧಿಕಾರಿಗಳಿಗೆ ಸಭೆ ಕರೆದು ಕೂಡಲೇ ಕಾರ್ಯಾಚರಣೆ ನಡೆಸುವಂತೆ ಆದೇಶ ನೀಡಿರುವುದು ಪಬ್ಲಿಕ್ ನೆಕ್ಸ್ಟ್ ಮಾಧ್ಯಮದ ಇಂಪ್ಯಾಕ್ಟ್ ಆಗಿದೆ. ಹುಬ್ಬಳ್ಳಿ - ಧಾರವಾಡ ಅವಳಿನಗರಗಳಲ್ಲಿ ಬೀದಿ ನಾಯಿಗಳ ಸಮೀಕ್ಷೆ ಕಾರ್ಯವನ್ನು 15 ದಿನದೊಳಗಾಗಿ ಆರಂಭಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚನೆ ನೀಡಿದ್ದಾರೆ.

ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಮೀಕ್ಷೆಯು ಸರ್ಕಾರೇತರ ಸಂಘ, ಸಂಸ್ಥೆಗಳ ಮೂಲಕ ಅವೈಜ್ಞಾನಿಕವಾಗಿ ನಡೆಯುತ್ತಿದ್ದು, ಸಾರ್ವಜನಿಕರ ಹಾಗೂ ಪ್ರಾಣಿಗಳ ಸುರಕ್ಷತೆ ದೃಷ್ಟಿಯಿಂದ ಪ್ರಾಮಾಣಿಕ ಕಾರ್ಯಾಚರಣೆ ವಿಧಾನ (ಸ್ಟಾಂಡರ್ಡ ಆಪರೇಟಿಂಗ್ ಪ್ರೊಸೀಜ‌ರ್) ಪ್ರಕಾರ ನುರಿತ ತಜ್ಞರಿಂದ ಸಮೀಕ್ಷೆ ಕೈಗೊಳ್ಳಬೇಕೆಂದು ಅವರು ಸೂಚಿಸಿದ್ದು, ಪಬ್ಲಿಕ್ ನೆಕ್ಸ್ಟ್ ಅಭಿಯಾನಕ್ಕೆ ದೊರೆತ ಜಯವಾಗಿದೆ.

ಮಲ್ಲೇಶ ಸೂರಣಗಿ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ

Edited By : Manjunath H D
Kshetra Samachara

Kshetra Samachara

09/09/2024 10:00 pm

Cinque Terre

104.28 K

Cinque Terre

8

ಸಂಬಂಧಿತ ಸುದ್ದಿ