ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಸೆಪ್ಟೆಂಬರ್ 15ರಂದು ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ

ಕಾರ್ಕಳ : ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗದ ವತಿಯಿಂದ ಭುವನೇಂದ್ರ ಕಾಲೇಜು ಕಾರ್ಕಳ ಇದರ ಸಭಾಂಗಣದಲ್ಲಿ ಸೆಪ್ಟೆಂಬರ್ 15ರಂದು 2024ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಮಡಿಕೇರಿ ಈ ಮೂರು ಜಿಲ್ಲೆಗಳ ಸಾಧಕ ಪ್ರಾಧ್ಯಾಪಕರುಗಳ ಶೈಕ್ಷಣಿಕ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಮಾಜಿ ಸಿಂಡಿಕೇಟ್ ಸದಸ್ಯ ಮೋಹನ್ ಪಡಿವಾಲ್ ಅವರು ತಿಳಿಸಿದರು. ‌ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಅವರು ನವದೆಹಲಿಯ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿಯ(NAAC)ಅಧ್ಯಕ್ಷರಾದ ಪ್ರೊ. ಅನಿಲ್ ಸಹಸ್ರಬುದ್ದೆ ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದರು.

2023 ನೇ ಸಾಲಿನಿಂದ ಆರಂಭವಾದ ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಶ್ವವಿದ್ಯಾನಿಲಯ ಘಟಕವು ಶಿಕ್ಷಣ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದ ಪ್ರಾಧ್ಯಾಪಕರನ್ನು ಗುರುತಿಸಿ ಬೇರೆ ಬೇರೆ ವಿಭಾಗಗಳಲ್ಲಿ ಪ್ರಶಸ್ತಿಯನ್ನು ನೀಡುತ್ತಿದೆ. ಅಂತೆಯೇ ಈ ಬಾರಿ ಜೀವಮಾನದ ಸಾಧನೆಗಾಗಿ ಶಾರದ ಸಮೂಹ ಸಂಸ್ಥೆಗಳು ಮಂಗಳೂರು ಇದರ ಅಧ್ಯಕ್ಷ ಪ್ರೊ. ಎಂ ಬಿ ಪುರಾಣಿಕ್

ಹಾಗೂ ಖ್ಯಾತ ಬರಹಗಾರರ ಹಾಗೂ ಶಿಕ್ಷಣ ತಜ್ಞ ಶಂಕರ್ ರಾವ್ ಇವರನ್ನು ಆಯ್ಕೆ ಮಾಡಲಾಗಿದೆ.

ಕಾಲೇಜು ಆಡಳಿತ ನಿರ್ವಹಣೆಯಲ್ಲಿನ ಸಾಧನೆಗಾಗಿ ಅತ್ಯುತ್ತಮ ಆಡಳಿತ ನಿರ್ವಾಹಕರಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರಿನ ಪ್ರಾಂಶುಪಾಲ ಡಾ. ಜಗದೀಶ್ ಬಾಳ ಹಾಗೂ ಹಾಗೂ ಎಸ್ ಡಿ ಎಮ್ ಸ್ವಾಯತ್ತ ಕಾಲೇಜು ಉಜಿರೆ ಪ್ರಾಂಶುಪಾಲ ಡಾ. ಬಿ.ಎ ಕುಮಾರ ಹೆಗ್ಡೆ ಇವರನ್ನು ಆಯ್ಕೆ ಮಾಡಲಾಗಿದೆ.

Edited By : PublicNext Desk
Kshetra Samachara

Kshetra Samachara

12/09/2024 04:26 pm

Cinque Terre

586

Cinque Terre

0

ಸಂಬಂಧಿತ ಸುದ್ದಿ