ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪೌರಕಾರ್ಮಿಕರ ಪಿತಾಮಹ ಐಪಿಡಿ ಸಾಲಪ್ಪರ 28ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ

ಬೆಂಗಳೂರು: ಇಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರ ಪಿತಾಮಹ ಐ.ಪಿ.ಡಿ. ಸಾಲಪ್ಪ ಅವರ 28ನೇ ವರ್ಷದ ಪುಣ್ಯಸ್ಮರಣೆ. ಈ ಹಿನ್ನೆಲೆಯಲ್ಲಿ ಪಾಲಿಕೆ ಕೇಂದ್ರ ಕಚೇರಿಯ ಆವರಣದಲ್ಲಿರುವ ಐ.ಪಿ.ಡಿ. ಸಾಲಪ್ಪ ಅವರ ಪ್ರತಿಮೆಗೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಮಾಲಾರ್ಪಣೆ ಮಾಡಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ವೇಳೆ ಆಡಳಿತ ವಿಭಾಗದ ವಿಶೇಷ ಆಯುಕ್ತ ಅವಿನಾಶ್ ಮೆನನ್ ರಾಜೇಂದ್ರನ್, ಪೂರ್ವ ವಲಯ ಆಯುಕ್ತ ಸ್ನೇಹಲ್, ಉಪ ಆಯುಕ್ತ ಮಂಜುನಾಥ್ ಸ್ವಾಮಿ, ಜಂಟಿ ಆಯುಕ್ತ ಪ್ರತಿಭಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

14/09/2024 01:48 pm

Cinque Terre

328

Cinque Terre

0

ಸಂಬಂಧಿತ ಸುದ್ದಿ