ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಭಂಡಾರಿಕೇರಿ ಮಠಾಧೀಶರ ಚಾತುರ್ಮಾಸ್ಯ ವ್ರತ ಸಂಪನ್ನ

ಉಡುಪಿ: ಭಂಡಾರಿಕೇರಿ ಮಠಾಧೀಶರು 37 ವರ್ಷಗಳ ಬಳಿಕ ಉಡುಪಿಯಲ್ಲಿ ತಮ್ಮ‌ 45ನೇ ಚಾತುರ್ಮಾಸ್ಯ ವ್ರತವನ್ನು ನಡೆಸಿದ್ದಾರೆ. ಇದೇ ವೇಳೆ 70 ನೇ ಜನ್ಮ ವರ್ಧಂತಿಯನ್ನು ಕಾಣುತ್ತಿರುವ ಶ್ರೀ ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶತೀರ್ಥ ಶ್ರೀಪಾದರಿಗೆ ಪರ್ಯಾಯ ಪುತ್ತಿಗೆ ಮಠ ಶ್ರೀ ಕೃಷ್ಣಮಠದ ವತಿಯಿಂದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಅಭಿನಂದನೋತ್ಸವ ನಡೆಯಿತು.

ಉಡುಪಿ ರಥಬೀದಿಯಲ್ಲಿ ಶ್ರೀ ಭಂಡಾರಕೇರಿ ಮಠದ ಪಟ್ಟದ ದೇವರಾದ ಶ್ರೀ ಕೋದಂಡರಾಮದೇವರ ಸ್ವರ್ಣ ರಥೋತ್ಸವ ನೆರವೇರಿದ ಬಳಿಕ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ನಡೆದ ವಿಶಿಷ್ಟ ಕಾರ್ಯಕ್ರಮದಲ್ಲಿ ನೂರಾರು ಮಹಿಳೆಯರಿಂದ ಶ್ರೀ ವಿದ್ಯೇಶ ತೀರ್ಥರು ರಚಿಸಿದ ಹರಿಕೀರ್ತನೆಗಳ ಸಾಮೂಹಿಕ ಗಾಯನ ನಡೆಯಿತು. ವೇದ, ವಾದ್ಯ ಮಂತ್ರ ಘೋಷಗಳ ಹಿನ್ನೆಲೆಯಲ್ಲಿ ನಾಣ್ಯಗಳಿಂದ ಶ್ರೀಗಳಿಗೆ ಸಾಲಂಕೃತ ತಕ್ಕಡಿಯಲ್ಲಿ ತುಲಾಭಾರ, ಮಂಗಳಾರತಿಗೈದ ಬಳಿಕ ಯಕ್ಷಕಿರೀಟಾಲಂಕೃತ ಸಿಂಹಾಸನದಲ್ಲಿ ಕುಳ್ಳಿರಿಸಿ ಶಾಲು ಹಾರ ಪುಷ್ಪಕಿರೀಟ ಧಾರಣ ಮಾಡಿ ಪುಷ್ಪಾಭಿಷೇಕ ನಡೆಸಲಾಯ್ತು., ಬೃಹತ್ ಕಡಗೋಲು, ನಿಧಿ , ಫಲವಸ್ತು ಸಹಿತ ಶ್ರೀ ಭಾಗವತ ಭಾಸ್ಕರ ಬಿರುದು ಹೊತ್ತ ಮಾನಪತ್ರ ಸಮರ್ಪಣಗೈಯ್ಯಲಾಯಿತು.

Edited By : Suman K
Kshetra Samachara

Kshetra Samachara

14/09/2024 05:00 pm

Cinque Terre

2.84 K

Cinque Terre

0

ಸಂಬಂಧಿತ ಸುದ್ದಿ