ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಲ್ಕತ್ತಾದಲ್ಲಿ ಹಾಡಹಗಲೇ ಸ್ಫೋಟ : ಓರ್ವ ಮಹಿಳೆಗೆ ಗಂಭೀರ ಗಾಯ

ಕೊಲ್ಕತ್ತಾದಲ್ಲಿ ಭಾರೀ ಸ್ಫೋಟ ಸಂಭವಿಸಿದ ಬಗ್ಗೆ ವರಿದಿಯಾಗಿದೆ. ಬ್ಲೋಚ್‌ಮನ್ ಸ್ಟ್ರೀಟ್ ಮತ್ತು ಎಸ್‌ಎನ್ ಬ್ಯಾನರ್ಜಿ ರಸ್ತೆಯ ಜಂಕ್ಷನ್‌ನಲ್ಲಿ ನಡೆದ ಸ್ಫೋಟದಲ್ಲಿ ಒಬ್ಬರು ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಎನ್‌ಆರ್‌ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಫೋಟ ಸಂಭವಿಸಿದ ಪ್ರದೇಶವನ್ನು ಸೀಲ್ ಮಾಡಲಾಗಿದ್ದು, ಬಾಂಬ್ ನಿಷ್ಕ್ರಿಯ ದಳವನ್ನು ನಿಯೋಜಿಸಲಾಗಿದೆ. ಸ್ಫೋಟದ ಸುದ್ದಿ ತಿಳಿದ ತಕ್ಷಣ ತಲಾತಾಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಇದಲ್ಲದೇ ಬಾಂಬ್ ನಿಷ್ಕ್ರಿಯ ದಳವನ್ನು ಕೂಡ ಕರೆಸಲಾಗಿದೆ.

ಸ್ಫೋಟದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ, ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಸ್ಫೋಟದ ಘಟನೆ ನಡೆದಿದ್ದು, ಒಬ್ಬರು ಗಾಯಗೊಂಡಿದ್ದಾರೆ.

Edited By : Abhishek Kamoji
PublicNext

PublicNext

14/09/2024 05:14 pm

Cinque Terre

191.46 K

Cinque Terre

3

ಸಂಬಂಧಿತ ಸುದ್ದಿ