ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ಪೊಲೀಸರ ಯಶಸ್ವಿ ಕಾರ್ಯಾಚರಣೆ- ಇಬ್ಬರು ಸೈಬರ್‌ ಖದೀಮರ ಸೆರೆ

ಹಾವೇರಿ: ಹಾವೇರಿ ಜಿಲ್ಲಾ ಸೈಬರ್‌ ಕ್ರೈಂ ಪೊಲೀಸರು ಇಬ್ಬರು ಸೈಬರ್ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರು ಮೂಲದ ರೂಪೇಶ್ ಎಚ್‌.ಎಂ. ಮತ್ತು ಚಿಕ್ಕಮಗಳೂರಿನ ಚೇತನ್ ಎಂ.ಎಸ್. ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಗಳು ಕಂಪ್ಯೂಟರ್, ಲ್ಯಾಪ್‌ಟಾಪ್ ಗಳನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ಹೇಳಿ, ಬಳಿಕ ವಂಚಿಸುತ್ತಿದ್ದರು.ಬಂಧಿತ ಆರೋಪಿಗಳಿಂದ ಲ್ಯಾಪ್‌ಟಾಪ್ ಮತ್ತು ಸ್ಮಾರ್ಟ್ ಫೋನ್ ಸೇರಿದಂತೆ ವಿವಿಧ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ.ಆರೋಪಿಗಳು ಹಾವೇರಿ ಜಿಲ್ಲೆ ಸೇರಿದಂತೆ ವಿವಿಧೆಡೆ ಕಡಿಮೆ ಬೆಲೆಗೆ ಕಂಪ್ಯೂಟರ್ ಉಪಕರಣ ನೀಡುವುದಾಗಿ ವಂಚಿಸಿದ್ದರು. ಈ ಕುರಿತಂತೆ ಹಾವೇರಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್‌ ಸಿಬ್ಬಂದಿ ಕಾರ್ಯಾಚರಣೆಗೆ ಎಸ್ಪಿ ಅಭಿನಂದನೆ ಸಲ್ಲಿಸಿದ್ದಾರೆ.

Edited By : Manjunath H D
PublicNext

PublicNext

15/09/2024 05:25 pm

Cinque Terre

22.96 K

Cinque Terre

0