ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ದ.ಕ.ಜಿಲ್ಲೆಯ ಅತ್ಯಂತ ಎತ್ತರದ ಧ್ವಜಸ್ತಂಭಕ್ಕೆ ಬಾವುಟಗುಡ್ಡೆಯಲ್ಲಿ ಶಿಲಾನ್ಯಾಸ

ಮಂಗಳೂರು: ಸ್ಮಾರ್ಟ್ ಸಿಟಿಯಿಂದ ನಿರ್ಮಾಣವಾಗುತ್ತಿರುವ ದ.ಕ.ಜಿಲ್ಲೆಯ ಅತ್ಯಂತ ಎತ್ತರದ ಧ್ವಜಸ್ತಂಭಕ್ಕೆ ರವಿವಾರ ನಗರದ ಬಾವುಟಗುಡ್ಡೆಯಲ್ಲಿ ಶಿಲಾನ್ಯಾಸ ನೆರವೇರಿತು.

1837ರಲ್ಲಿ ಮಂಗಳೂರನ್ನು ಕೇಂದ್ರ ಸ್ಥಾನವನ್ನಾಗಿ ಮಾಡಿ ಆಡಳಿತ ನಡೆಸುತ್ತಿದ್ದ ಬ್ರಿಟೀಷರನ್ನು ಕೆದಂಬಾಡಿ ರಾಮಯ್ಯ ಗೌಡ ಎಂಬವರು ರೈತವೀರರನ್ನು ಸಂಘಟಿಸಿ ಹೋರಾಟ ಮಾಡಿದರು. ಹೋರಾಟದಲ್ಲಿ ಯಶಸ್ಸು ಪಡೆದ ಅವರು ನಗರದ ಬಾವುಟಗುಡ್ಡೆಯಲ್ಲಿ ಬ್ರಿಟಿಷ್ ಧ್ವಜವನ್ನು ಇಳಿಸಿ ನಮ್ಮ ನೆಲ ಸ್ವಾತಂತ್ರ್ಯವಾಗಿದೆಎಂದು ಘೋಷಿಸಿ ಸುಮಾರು 13 ದಿವಸಗಳವರೆಗೆ ಬಾವುಟವನ್ನು ಹಾರಿಸಿದ್ದರು.

ಈ ಹಿನ್ನೆಲೆಯಲ್ಲಿ ಬಾವುಟಗುಡ್ಡೆಯ ಇತಿಹಾಸವನ್ನು ಶಾಶ್ವತಗೊಳಿಸುವ ಸಲುವಾಗಿ ಧ್ವಜಸ್ತಂಭವನ್ನು ನಿರ್ಮಿಸಲು ಸ್ವಾತ್ರಂತ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯ ಅಧ್ಯಕ್ಷ ಶ್ರೀ ಕಿರಣ್ ಬುಡ್ಲೆಗುತ್ತು ಅವರು ಎಂಎಲ್‌ಸಿ ಮಂಜುನಾಥ ಭಂಡಾರಿಯವರಿಗೆ ಮನವಿ ಸಲ್ಲಿಸಿದ್ದರು. ಅದರಂತೆ ಮಂಜುನಾಥ ಭಂಡಾರಿಯವರು ರಾಜ್ಯ ಸರ್ಕಾರದೊಂದಿಗೆ ಮಾತನಾಡಿ ಸ್ಮಾರ್ಟ್‌ಸಿಟಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತಿ ಎತ್ತರವಾದ ಧ್ವಜಸ್ತಂಭ ನಿರ್ಮಿಸುವಂತೆ ಮನವಿ ಮಾಡಿದ್ದರು.

ಅದರಂತೆ ಇಂದು ಬಾವುಟಗುಡ್ಡೆಯಲ್ಲಿ ಧ್ವಜಸ್ತಂಭ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿದೆ. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ, ಎಂಎಲ್‌ಸಿ ಮಂಜುನಾಥ ಭಂಡಾರಿ, ಶಾಸಕ ವೇದವಾಸ್ ಕಾಮತ್, ಮೇಯರ್ ಸುಧೀರ್ ಶೆಟ್ಟಿ , ಮನಪಾ ವಿರೋಧ ಪಕ್ಷದ ನಾಯಕರಾದ ಪ್ರವೀಣ್ ಚಂದ್ರ ಆಳ್ವ, ಮಾಜಿ ಎಂಎಲ್‌ಸಿ ಕೆ ಹರೀಶ್ ಕುಮಾರ್ ಹಾಗು ಮನಪಾ ಸದಸ್ಯರುಗಳು ಉಪಸ್ಥಿತರಿದ್ದರು.

Edited By : Abhishek Kamoji
PublicNext

PublicNext

15/09/2024 07:43 pm

Cinque Terre

23.26 K

Cinque Terre

2

ಸಂಬಂಧಿತ ಸುದ್ದಿ