ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾಖಲೆ ಬರೆದ ಧಾರವಾಡ: ಮಾನವ ಸರಪಳಿಯಲ್ಲಿ ಪಾಲ್ಗೊಂಡ 95 ಸಾವಿರ ಜನ

ಧಾರವಾಡ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೀದರ್‌ನಿಂದ ಚಾಮರಾಜನಗರದವರೆಗೆ ನಡೆದ ಮಾನವ ಸರಪಳಿ ನಿರ್ಮಾಣ ಕಾರ್ಯದಲ್ಲಿ ಧಾರವಾಡ ದಾಖಲೆ ಬರೆದಿದೆ. ಇಂದು ನಡೆದ ಮಾನವ ಸರಪಳಿ ನಿರ್ಮಾಣದಲ್ಲಿ 95 ಸಾವಿರ ಜನ ಪಾಲ್ಗೊಂಡಿದ್ದಾರೆ.

ಧಾರವಾಡದಲ್ಲಿ ನಡೆದ ಮಾನವ ಸರಪಳಿ ನಿರ್ಮಾಣದ ಪ್ರತಿಯೊಂದ ಝಲಕ್ ಡ್ರೋಣ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಸವಿ ನೆನಪಿಗಾಗಿ ಅರಣ್ಯ ಇಲಾಖೆಯ ಸಾಮಾಜಿಕ ಅರಣ್ಯ ವಿಭಾಗದಿಂದ 4180 ವಿವಿಧ ಬಗೆಯ ಸಸಿಗಳನ್ನು ನೆಡುವ ಕಾರ್ಯಕ್ರಮ ಕೂಡ ನಡೆಯಿತು.

ಧಾರವಾಡ ತಾಲೂಕಿನ ಕೋಟೂರಿನಿಂದ ದುಬ್ಬನಮರಡಿ ಮತ್ತು ಬೋಗೂರು ಕ್ರಾಸ್‌ನಿಂದ ಹಳೇ ತೇಗೂರು, ಶಿಂಗನಹಳ್ಳಿ ಕ್ರಾಸ್‌ನಿಂದ ಆದಿಚುಂಚನಗಿರಿ ಮಠ, ಹೊಸೆಟ್ಟಿಯಿಂದ ಹೊಸೆಟ್ಟಿ ಕ್ರಾಸ್‍ವರೆಗೆ ರಸ್ತೆಯ ಬದಿಗಳಲ್ಲಿ ಮತ್ತು ಸಲಕಿನಕೊಪ್ಪ, ಬಾಡ ಗ್ರಾಮಗಳಲ್ಲಿನ ಸರ್ಕಾರಿ ಗೋಮಾಳ ಜಮೀನಗಳಲ್ಲಿ ಸಸಿಗಳನ್ನು ನೆಡಲಾಯಿತು.

ಇಂದಿನ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಬೃಹತ್ ಮಾನವ ಸರಪಳಿ ನಿರ್ಮಾಣ ನಿರ್ಮಿಸುವ ಕಾರ್ಯದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ, ಸರ್ಕಾರಿ ನೌಕರರಿಗೆ ಅನುಕೂಲವಾಗಲು ಮತ್ತು ಸುಗಮ ಸಂಚಾರಕ್ಕೆ ಜಿಲ್ಲಾಡಳಿತದಿಂದ ಸುಗಮ ಸಾರಿಗೆ ವ್ಯವಸ್ಥೆ ಮಾಡಲಾಗಿತ್ತು. ಇಂದಿನ ಕಾರ್ಯಕ್ರಮಕ್ಕೆ ಸಂಚಾರಕ್ಕಾಗಿ ವಿವಿಧ ರೀತಿಯ ಸುಮಾರು 391 ವಾಹನಗಳು ಬಳಕೆ ಆಗಿದ್ದವು.

Edited By : Vinayak Patil
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

15/09/2024 07:46 pm

Cinque Terre

141.76 K

Cinque Terre

6

ಸಂಬಂಧಿತ ಸುದ್ದಿ