ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮುನಿರತ್ನ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ - ಸಿಎಂಗೆ ದೂರು ನೀಡಲಿರುವ ಒಕ್ಕಲಿಗ ಸಮುದಾಯದ ಸಚಿವರು, ಶಾಸಕರು

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿನಿಂದನೆ ಮತ್ತು ಜೀವಬೆದರಿಕೆ ಆರೋಪ ಹಿನ್ನೆಲೆಯಲ್ಲಿ ಪೊಲೀಸ್ ಕಸ್ಡಡಿಯಲ್ಲಿದ್ದಾರೆ. ಶಾಸಕ ಮುನಿರತ್ನ ಮಾತನಾಡಿದ್ದಾರೆ ಎನ್ನಲಾದ ಆಡಿಯೋದಲ್ಲಿ ಒಕ್ಕಲಿಗ ಸಮುದಾಯ ಹಾಗೂ ಒಕ್ಕಲಿಗ ಹೆಣ್ಣು ಮಕ್ಕಳ ಬಗ್ಗೆ ಅವಾಚ್ಯ ನಿಂದನೆ ಮಾಡಿದ್ದಾರೆ ಎಂದು ಮುನಿರತ್ನ ವಿರುದ್ಧ ಕಾಂಗ್ರೆಸ್ ಭುಗಿಲೆದ್ದು, ಶಾಸಕರು ಮತ್ತು ಸಚಿವರುಗಳು ಮುನಿರತ್ನ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸುತ್ತಿದೆ.

ಇದರ ನಡುವೆ ಇಂದು ಸಿಎಂ ಸಿದ್ದರಾಮಯ್ಯರನ್ನ ಒಕ್ಕಲಿಗ ಸಮುದಾಯದ ಸಚಿವರು ಶಾಸಕರುಗಳು ಭೇಟಿ ಮಾಡಿ ಮುನಿರತ್ನ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮಕ್ಕೆ ಮನವಿ ಸಲ್ಲಿಸಲಿದ್ದಾರೆ. ಗುತ್ತಿಗೆದಾರ ಚಲುವರಾಜು ಸಹ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮುನಿರತ್ನ ವಿರುದ್ಧ ದೂರು ನೀಡಿದ್ದರು. ಚಲುವರಾಜು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಬಳಿಕ ಮುನಿರತ್ನರನ್ನ ಬಂಧಿಸಲಾಗಿತ್ತು.

ಇನ್ನೊಂದೆಡೆ ಕೆಪಿಸಿಸಿ ಮಹಿಳಾ ಘಟಕ ಮುನಿರತ್ನ ವಿರುದ್ದ ಮಹಿಳಾ ಆಯೋಗಕ್ಕೆ ದೂರು ನೀಡಲಿದೆ ಮತ್ತು ಕೆಪಿಸಿಸಿ ಹಿಂದುಳಿದ ವರ್ಗ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮುನಿರತ್ನ ವಿರುದ್ಧ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ ಅಲ್ಲದೇ ಜಾತಿ ನಿಂದನೆ ಮಾಡಿರುವ ಮುನಿರತ್ನ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಚಿಂತನೆ ನಡೆಸಿದ್ದಾರೆ.

ಮುಡಾ ಹಾಗೂ ವಾಲ್ಮೀಕಿ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ವಿರುದ್ಧ ತೀವ್ರವಾಗಿ ಟೀಕಿಸುತ್ತಿದ್ದ ಬಿಜೆಪಿಗೆ ಈಗ ಮುನಿರತ್ನ ಪ್ರಕರಣವನ್ನ ಇಟ್ಟುಕೊಂಡು ಬಿಜೆಪಿ ವಿರುದ್ಧ ವಾಗ್ದಾಳಿಗೆ ಕಾಂಗ್ರೆಸ್ ಮುಂದಾಗ್ತಿದೆ.

Edited By : Abhishek Kamoji
PublicNext

PublicNext

16/09/2024 08:53 am

Cinque Terre

185.84 K

Cinque Terre

4

ಸಂಬಂಧಿತ ಸುದ್ದಿ