ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಸ್ಥಳೀಯ ಸರಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಕಾಂಗ್ರೆಸ್ ವಿರುದ್ಧ HDK ವಾಗ್ದಾಳಿ

ಬೆಂಗಳೂರು : ಕಾಂಗ್ರೆಸ್ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದು 1 ವರ್ಷ 4 ತಿಂಗಳಾದ್ರು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸದಿರೋದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ತಮ್ಮ X ಖಾತೆಯಲ್ಲಿ ರಾಜ್ಯ ಸರ್ಕಾರದ ನಡೆಯನ್ನ ಟೀಕಿಸಿರುವ ಕುಮಾರಸ್ವಾಮಿ, ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ಕಾಂಗ್ರೆಸ್ ಸರಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದಿದ್ದಾರೆ.

ಅಧಿಕಾರಕ್ಕೇರಿದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ & ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ? ಸ್ಥಳೀಯ ಸರಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ?

ಸಿದ್ದರಾಮಯ್ಯನವರೇ.. ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20) ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ!

ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ ಎಂದು ಆರೋಪಿಸಿದರು. ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ? ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ. ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ ಎಂದು ಆಗ್ರಹಿಸಿದ್ದಾರೆ.

Edited By : Abhishek Kamoji
PublicNext

PublicNext

16/09/2024 10:18 am

Cinque Terre

200.32 K

Cinque Terre

5

ಸಂಬಂಧಿತ ಸುದ್ದಿ