ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಜನರ ಪಾಲ್ಗೊಳ್ಳುವಿಕೆಯಲ್ಲಿ ಧಾರವಾಡ ಜಿಲ್ಲೆ ರಾಜ್ಯಕ್ಕೆ ಪ್ರಥಮ

ಧಾರವಾಡ: ಸಂವಿಧಾನ, ಪ್ರಜಾಪ್ರಭುತ್ವ, ಮಾನವ ಹಕ್ಕು, ಶಿಕ್ಷಣ ಕ್ಷೇತ್ರಗಳಲ್ಲಿ ಸದಾ ಕಾಲ ತನ್ನದೇ ಚಾಪು ಮೂಡಿಸುವ ಧಾರವಾಡ ಜಿಲ್ಲೆ ನಿನ್ನೆಯ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಅತೀ ಹೆಚ್ಚು ಜನರು ಭಾಗವಹಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ದಾಖಲೆ ನಿರ್ಮಿಸಿದೆ.

ನಿನ್ನೆಯ ಮಾನವ ಸರಪಳಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ಸಂಘ ಸಂಸ್ಥೆಗಳ ಸದಸ್ಯರು, ಸಾರ್ವಜನಿಕರು ಸೇರಿ ಸುಮಾರು 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ, ಕಾರ್ಯಕ್ರಮವನ್ನು ಅಭೂತಪೂರ್ವವಾಗಿ ಯಶಸ್ವಿಗೊಳಿಸಿದ್ದಾರೆ.

ರಾಜ್ಯದ 31 ಜಿಲ್ಲೆಗಳಿಂದ ಒಟ್ಟು 25,35,223 ಜನರು ಪ್ರಜಾಪ್ರಭುತ್ವ ದಿನಾಚರಣೆಗೆ ಆನ್‍ಲೈನ್ ಮೂಲಕ ನೋಂದಾಯಿಸಿಕೊಂಡಿದ್ದು, ಈ ಪೈಕಿ ಧಾರವಾಡ ಜಿಲ್ಲೆಯಿಂದಲೇ ಸುಮಾರು 3,57,555 ಜನ ತಮ್ಮ ಹೆಸರು ನೋಂದಾಯಿಸಿಕೊಳ್ಳುವ ಮೂಲಕ ದಾಖಲೆ ಬರೆದಿದ್ದಾರೆ.

Edited By : Suman K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

16/09/2024 11:29 am

Cinque Terre

56.91 K

Cinque Terre

0

ಸಂಬಂಧಿತ ಸುದ್ದಿ