ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಚಡ್ಡಿ ಬನಿಯನ್‌ನಲ್ಲಿ ತಿರುಗಾಡುತ್ತಿದ್ದ ಅನುಮಾನಾಸ್ಪದ ವ್ಯಕ್ತಿ ಪೊಲೀಸ್ ವಶಕ್ಕೆ

ಕುಂದಾಪುರ: ಇಲ್ಲಿನ ಕೋಡಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಚಡ್ಡಿ ಮತ್ತು ಬನಿಯನ್ ಧರಿಸಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದಲ್ಲದೇ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮೂರ್ನಾಲ್ಕು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕುಂದಾಪುರ ತಾಲೂಕಿನ ಕೋಡಿ ಭಾಗದ ಫಿಶರೀಸ್ ಏರಿಯಾದಲ್ಲಿ ಈ ಘಟನೆ ನಡೆದಿದ್ದು, ಸುಮಾರು 30 ರಿಂದ 35 ವರ್ಷ ವಯಸ್ಸಿನ ಯುವಕ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಎನ್ನಲಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ಆತನನ್ನು ವಿಚಾರಿಸಿದಾಗ ಸರಿಯಾದ ಉತ್ತರ ನೀಡದೆ ಇದ್ದ ಕಾರಣ ಅನುಮಾನಗೊಂಡ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮೂರು ನಾಲ್ಕು ದಿನಗಳ ಹಿಂದೆ ರಾತ್ರಿ ಬಿಳಿ ಬನಿಯನ್ ಮತ್ತು ಚಡ್ಡಿ ಯಲ್ಲಿ ಓಡಾಡುತ್ತಿದ್ದ ಈ ವ್ಯಕ್ತಿ ಯಾವುದೋ ಚಡ್ಡಿ ಗ್ಯಾಂಗಿನ ಸದಸ್ಯ ಇರಬಹುದು ಎಂದು ಸ್ಥಳೀಯರು ಊಹಿಸಿದ್ದರು. ಅಲ್ಲದೆ ಅನುಮಾನಾಸ್ಪದವಾಗಿ ತಿರುಗಾಡುತ್ತಿರುವುದರಿಂದ ಕಳ್ಳತನಕ್ಕೆ ಯತ್ನಿಸುತ್ತಿರಬಹುದು ಎಂದು ಭಾವಿಸಿದ್ದರು. ಪೊಲೀಸರು ಘಟನಾ ಸ್ಥಳಕ್ಕೆ ಬಂದು ಅನುಮಾನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ವಶಕ್ಕೆ ಪಡೆದುಕೊಳ್ಳಲಾದ ವ್ಯಕ್ತಿಯು ಮಾನಸಿಕ ಅಸ್ವಸ್ಥನಾಗಿದ್ದು ಮದ್ಯ ಸೇವನೆ ಮಾಡಿದ್ದ ಎಂದು ತಿಳಿದು ಬಂದಿದೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಆದರೆ ಘಟನೆಯ ವಿಡಿಯೋಗಳು ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

Edited By : Shivu K
PublicNext

PublicNext

16/09/2024 01:20 pm

Cinque Terre

49.69 K

Cinque Terre

1

ಸಂಬಂಧಿತ ಸುದ್ದಿ