ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: 'ಬಿ.ಸಿ.ರೋಡ್‌ ಚಲೋ' ಸ್ಥಳದಲ್ಲಿ‌ ಬಿಗುವಿನ ವಾತಾವರಣ - ಹಿಂದೂ ಕಾರ್ಯಕರ್ತರಿಂದ ಪ್ರತಿಭಟನೆ

ಬಂಟ್ವಾಳ: ಈದ್‌ಮಿಲಾದ್ ಮೆರವಣಿಗೆ ನಡೆಸಲು ಬಿಡಬಾರದೆಂದು ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಹೇಳಿಕೆಯ ಹಿನ್ನೆಲೆಯಲ್ಲಿ ತಾಕತ್ತಿದ್ದರೆ ತಡೆಯಿರಿ ಎಂಬ ಕಾಂಗ್ರೆಸ್ ಮುಖಂಡರೋರ್ವರು ಆಡಿಯೋ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬಜರಂಗದಳ-ವಿಎಚ್‌ಪಿ 'ಬಿ‌.ಸಿ.ರೋಡ್ ಚಲೋ' ನಡೆಸಿದ್ದಾರೆ.

ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಆದರೆ ಸ್ಥಳದಲ್ಲಿ ಪೊಲೀಸ್ ಸರ್ಪಗಾವಲು ಇದ್ದು, ಪ್ರತಿಭಟನಾ ಮೆರವಣಿಗೆ ನಡೆಸಿದ ಹಿಂದೂ ಕಾರ್ಯಕರ್ತರನ್ನು ಪೊಲೀಸರು ಬ್ಯಾರಿಕೇಡ್ ಅಳವಡಿಸಿ ಅರ್ಧದಲ್ಲೇ ತಡೆದಿದ್ದಾರೆ. ಈ ವೇಳೆ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ತಳ್ಳಾಟ - ನೂಕಾಟ ನಡೆದಿದೆ.

ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಮಾತನಾಡಿದ್ದಾರೆ. ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು, ಪ್ರತಿಭಟನಾ ಕಾವು ಈಗಲೂ ಮುಂದುವರಿದಿದೆ. ಪೊಲೀಸರು ಪ್ರತಿಭಟನಾಕಾರರನ್ನು ಹತೋಟಿಗೆ ತರಲು ಹರಸಾಹಸ ಪಡುತ್ತಿದ್ದಾರೆ.

Edited By : Nagesh Gaonkar
PublicNext

PublicNext

16/09/2024 01:22 pm

Cinque Terre

26.24 K

Cinque Terre

8

ಸಂಬಂಧಿತ ಸುದ್ದಿ