ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸಾಲು ಸಾಲು ಗಲಭೆ ನಡೆದರೂ ಸರ್ಕಾರ ಎಚ್ಚೆತ್ತುಕೊಳ್ಳುತ್ತಿಲ್ಲ - ಶಾಸಕ ಟೆಂಗಿನಕಾಯಿ ಕಿಡಿ..!

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ತುಷ್ಟೀಕರಣ ಮಿತಿ‌ಮೀರಿದೆ. ಸರ್ಕಾರದ ತುಷ್ಟಿಕರಣ ನೀತಿಯಿಂದಾಗಿ ರಾಜ್ಯದಲ್ಲಿ ಹೆಚ್ಚು ಗಲಭೆ ಗಲಾಟೆಗಳು ನಡೆಯುತ್ತಿವೆ ಎಂದು ಹುಬ್ಬಳ್ಳಿಯಲ್ಲಿ ಸರ್ಕಾರದ ವಿರುದ್ಧ ಶಾಸಕ ಮಹೇಶ ಟೆಂಗಿನಕಾಯಿ ಕಿಡಿ ಕಾರಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ತುಷ್ಟೀಕರಣದ ನೀತಿಯಿಂದ ಸರ್ಕಾರವೇ ಸಮಸ್ಯೆಗಳನ್ನು ತಂದೊಡ್ಡಿಕೊಳ್ಳುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟ ಸಂದರ್ಭದಲ್ಲಿ ಗಲಭೆಗಳು ನಡೆಯುತ್ತವೆ ಎಂದರು.

ಮಂಗಳೂರಿನಲ್ಲಿ ಮುಸ್ಲಿಂ ಸಮುದಾಯದಿಂದ ಈದ್ ಮಿಲಾದ್ ಮೆರವಣಿಗೆ ವಿಷಯಕ್ಕೆ ಸವಾಲ್ ಹಾಕಿದ್ದು ತಪ್ಪು. ಹೀಗೆ ಸವಾಲು ಹಾಕಿದರೇ ಎದುರಿನವರನ್ನು ರೊಚ್ಚಿಗೆಳಿಸುತ್ತದೇ. ಇದು ಗಲಭೆ, ಗಲಾಟೆಗಳಿಗೆ ಕಾರಣವಾಗುತ್ತವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದ್ದರೇ ಇಂತಹ ಘಟನೆ ನಡೆಯೋದಿಲ್ಲ. ಸರ್ಕಾರ ಅಲ್ಪಸಂಖ್ಯಾತರ ತುಷ್ಟಿಕರಣ ನಿಲ್ಲಿಸಬೇಕು ಎಂದು ಅವರು ಸೂಚನೆ ನೀಡಿದರು.

ರಾಜ್ಯದಲ್ಲಿ ಸಾಲು ಸಾಲು ಗಲಭೆ ಗಲಾಟೆ ನಡೆಯುತ್ತಿದ್ದರೂ ಸರ್ಕಾರ ಎಚ್ಚೆತ್ತುಕೊಳ್ಳುತ್ತಿಲ್ಲ, ಪೊಲೀಸರ ಮೇಲೆ ವಿನಾಕಾರಣ ದಬ್ಬಾಳಿಕೆ, ಒತ್ತಡ ಹಾಕಬಾರದು. ಪೊಲೀಸರಿಗೆ ಸ್ವತಂತ್ರ ಅಧಿಕಾರ ಕೊಡಬೇಕು. ಗಲಭೆಕೋರರು ಹಾಗೂ ಗಲಭೆ ಸೃಷ್ಟಿಕರ್ತರ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಮುಂದಾಗಬೇಕು ಎಂದು ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಆಗ್ರಹಿಸಿದರು.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

16/09/2024 03:00 pm

Cinque Terre

61.7 K

Cinque Terre

2

ಸಂಬಂಧಿತ ಸುದ್ದಿ