ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಪುರಸಭಾ ವ್ಯಾಪ್ತಿಯಲ್ಲಿ 48ಗಂಟೆಗಳ ಕಾಲ ಮದ್ಯದಂಗಡಿ ಬಂದ್

ಬಂಟ್ವಾಳ : ಪ್ರಚೋದಿತ ಆಡಿಯೋ ವೈರಲ್ ಹಿನ್ನೆಲೆಯಲ್ಲಿ ವಿಎಚ್‌ಪಿ, ಬಜರಂಗದಳ ಕರೆನೀಡಿರುವ ಬಿ.ಸಿ.ರೋಡ್ ಚಲೋ ಹೈಡ್ರಾಮಾದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ 48ಗಂಟೆಗಳ ಕಾಲ ಮದ್ಯದಂಗಡಿ ಬಂದ್ ಮಾಡಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಬಿ.ಸಿ.ರೋಡ್ ಜಂಕ್ಷನ್‌ನಲ್ಲಿ ಸಂಘಟನೆಯವರು ಸೇರಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆಯಲ್ಲಿ ಪಾಲ್ಗೊಂಡ ಕಾರ್ಯಕರ್ತರು ಅಲ್ಲಲ್ಲಿ ಸೇರಿಕೊಂಡು ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆಗಳಿದೆ. ಬಂಟ್ವಾಳ ನಗರ ಕೋಮುಸೂಕ್ಷ್ಮ ಪ್ರದೇಶವಾಗಿದ್ದು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಮುಂದಿನ 48 ಗಂಟೆಗಳ ಅವಧಿಯವರೆಗೆ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಅಬಕಾರಿ ಉಪಆಯುಕ್ತರಿಗೆ ನಿರ್ದೇಶನ ನೀಡಿದೆ. ನಿಷೇಧಾಜ್ಞೆ ಜಾರಿಯಿರುವ ಸಮಯದಲ್ಲಿ ಮೇಲ್ಕಾಣಿಸಿದ ಮದ್ಯದಂಗಡಿ/ಬಾರ್, ಶೇಂದಿ ಮಾರಾಟದ ಅಂಗಡಿಗಳ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಮೊಹರು (ಸೀಲು) ಕಡ್ಡಾಯಗೊಳಿಸಲು ತಿಳಿಸಿದೆ.

ಎಲ್ಲಾ ತರಹದ ಅಮಲು ಪದಾರ್ಥಗಳನ್ನು ಖಾಸಗಿ ವ್ಯಕ್ತಿಗಳು ಶೇಖರಿಸಿಡಬಾರದು. ಅಬಕಾರಿ ಕಾಯ್ದೆಡಿಯಲ್ಲಿ ಪರವಾನಿಗೆ ಹೊಂದದೆ ಅನಧಿಕೃತವಾಗಿ ಅಮಲುಪದಾರ್ಥಗಳನ್ನು ಶೇಖರಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಸೂಚಿಸಲಾಗಿದೆ.

Edited By : Nirmala Aralikatti
Kshetra Samachara

Kshetra Samachara

16/09/2024 05:36 pm

Cinque Terre

2.67 K

Cinque Terre

0

ಸಂಬಂಧಿತ ಸುದ್ದಿ