ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಹಗಲು-ರಾತ್ರಿ ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ - ವಲಯ ಆಯುಕ್ತರು ರಮ್ಯಾ

ಬೆಂಗಳೂರು: ಬೊಮ್ಮನಹಳ್ಳಿ ವಲಯದಲ್ಲಿ ಹಗಲು-ರಾತ್ರಿ ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚುಲಾಗುತ್ತಿದೆ ಹಾಗೂ ಇನ್ನುಳಿದ ರಸ್ತೆ ಗುಂಡಿಗಳನ್ನು ಸಹ ಹಗಲು ರಾತ್ರಿ ಕೆಲಸ ನಿರ್ವಹಿಸಿ ಮುಚ್ಚಲಾಗುವುದೆಂದು ವಲಯ ಆಯುಕ್ತರಾದ ರಮ್ಯಾ, ಐಎಎಸ್ ರವರು ತಿಳಿಸಿದ್ದಾರೆ.

ಉಪ ಮುಖ್ಯಮಂತ್ರಿಗಳ ಆದೇಶ ಹಾಗೂ ಮುಖ್ಯ ಆಯುಕ್ತರ ನಿರ್ದೇಶನದಂತೆ ನಗರದ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಜೆಪಿ ನಗರದ ನಂದಿನಿ‌ ಹೋಟೆಲ್ ಬಳಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.

ರಸ್ತೆ ಗುಂಡಿಗಳನ್ನು ಮುಚ್ಚಲು ಎಲ್ಲಾ ರೀತಿಯ ಸೂಕ್ತ‌ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ ಸಾಕಷ್ಟು ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಮಳೆ ಬಾರದಿರುವ ಹಿನ್ನೆಲೆ ನಿರಂತರವಾಗಿ ರಸ್ತೆ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗಿದೆ ಎಂದು ಹೇಳಿದರು.

ಸಂಚಾರ ದಟ್ಟಣೆ ಹೆಚ್ಚಿರುವ ರಸ್ತೆಗಳಲ್ಲಿ ಆದ್ಯತೆ ಮೇರೆಗೆ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಇದೀಗ ವಾರ್ಡ್ ರಸ್ತೆಗಳಲ್ಲಿ ಎಲ್ಲೆಲ್ಲಿ ರಸ್ತೆ ಗುಂಡಿಗಳಿವೆ ಅವುಗಳನ್ನು ಕೂಡಲೇ ಮುಚ್ಚಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Edited By : Vinayak Patil
PublicNext

PublicNext

16/09/2024 06:37 pm

Cinque Terre

18.98 K

Cinque Terre

0

ಸಂಬಂಧಿತ ಸುದ್ದಿ