ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಗಣೇಶ ವಿಸರ್ಜನೆಗೆ ಬಿಗಿ ಭದ್ರತೆ, ಸಾರ್ವಜನಿಕರ ಸಹಕಾರಕ್ಕೆ ಕಮಿಷನರ್ ಕರೆ..!

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹನ್ನೊಂದನೇ ದಿನದ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಮೂರು ಸಾವಿರಕ್ಕೂ ಹೆಚ್ಚು ಪೊಲೀಸ್ ನಿಯೋಜನೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಎ‌ನ್.ಶಶಿಕುಮಾರ್ ಹೇಳಿದರು.

ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಹತ್ತು ದಿನಗಳ ಕಾಲ ವಿಜೃಂಭಣೆಯಿಂದ ಗಣೇಶೋತ್ಸವ ಆಚರಣೆ ಮಾಡಿದ್ದು, ಇಂದು ವಿಸರ್ಜನೆಗೂ ಕೂಡ ಶಾಂತಿ ಸೌಹಾರ್ದತೆಯಿಂದ ಸಾರ್ವಜನಿಕರು ಸಹಕಾರ ಮಾಡಬೇಕು ಎಂದರು.

ನೂರಕ್ಕೂ ಹೆಚ್ಚು ಗಣಪತಿ ವಿಸರ್ಜನೆ ಮಾಡಲಾಗುತ್ತಿದ್ದು, ಮೂರು ಸಾವಿರಕ್ಕೂ ಹೆಚ್ಚು ಪೊಲೀಸ್, ಕೆ.ಎಸ್.ಆರ್.ಪಿ, ರ್ಯಾಪಿಡ್ ಆ್ಯಂಟಿಜನ್ ಫೋರ್ಸ್ ಸೇರಿದಂತೆ ವಿವಿಧ ಅಧಿಕಾರಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಅಲ್ಲದೇ ಬಹುತೇಕ ಕಡೆಯಲ್ಲಿ ಸಿಸಿಟಿವಿ ಕಣ್ಗಾವಲು ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಇನ್ನೂ ಪಾಲಿಕೆಗೆ ಸೂಚನೆ ನೀಡಿರುವಂತೆ ಕುಡಿಯುವ ನೀರಿನ ವ್ಯವಸ್ಥೆ, ಸುರಕ್ಷತಾ ತಾಣ, ಆಂಬ್ಯುಲೆನ್ಸ್ ವ್ಯವಸ್ಥೆ ಜೊತೆಗೆ ಎಲ್ಲ ರೀತಿಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, 2.5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಕಮಿಷನರ್ ಮಾಹಿತಿ ನೀಡಿದರು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

17/09/2024 04:01 pm

Cinque Terre

72.07 K

Cinque Terre

8

ಸಂಬಂಧಿತ ಸುದ್ದಿ