ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪ್ರಸ್ತುತ ರಾಜಕಾರಣದ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಭಾಪತಿ ಹೊರಟ್ಟಿ

ಧಾರವಾಡ: ಪ್ರಸ್ತುತ ರಾಜಕಾರಣದ ಬಗ್ಗೆ ಸಭಾಪತಿ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ.

ಧಾರವಾಡದಲ್ಲಿ ಮಾತನಾಡಿರುವ ಅವರು, ಮೊದಲು 224 ಶಾಸಕರು ಹಾಗೂ 66 ವಿಧಾನ ಪರಿಷತ್ ಸದಸ್ಯರನ್ನು ಮಾಡಿದ್ದರೆ ಮುಗಿಯುತ್ತಿತ್ತು. ಅವರನ್ನು ಐದು ವರ್ಷ ಏನೂ ಮಾಡುತ್ತಿರಲಿಲ್ಲ. ಆದರೆ, ಈಗ ಏನಾಗುತ್ತಿದೆ ಎಂಬುದೇ ಗೊತ್ತಾಗುತ್ತಿಲ್ಲ. ಹೀಗಾಗಿ ನಾನು ನನ್ನ ಅನುಭವ ಹೇಳಿಕೊಳ್ಳುತ್ತಿದ್ದೇನೆ. ನಾನು ಗ್ರಾಮೀಣಾಭಿವೃದ್ಧಿ ಸಚಿವನಾಗಿದ್ದೆ. ಆಗ ನನ್ನ ಖಾತೆ ಬಿಟ್ಟು ಕೊಡುವಂತೆ ಸಿಎಂ ಸಚಿವ ಸಂಪುಟ ಸಭೆಯಲ್ಲಿ ಹೇಳಿದ್ದರು. ಆಗ ನಾನು ಖಾತೆ ಬಿಟ್ಟು ಕೊಡಲು ಒಪ್ಪಿದ್ದೆ. ಈಗಿನ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಇಂದಿನ ರಾಜಕಾರಣದ ಮೌಲ್ಯ ಕಡಿಮೆಯಾಗುತ್ತಿದೆ ಎಂದರು.

ಇಂದು ದುಡ್ಡು ಕೊಟ್ಟು ಮತ ಹಾಕಿಸಿಕೊಳ್ಳುತ್ತಿದ್ದಾರೆ. ದುಡ್ಡು ತೆಗೆದುಕೊಂಡು ಮತ ಹಾಕುವ ಮತದಾರರು ಹೆಚ್ಚಾಗಿದ್ದಾರೆ. ಈ ಪದ್ಧತಿ ಇರುವವರೆಗೂ ಏನು ಬೇಕಾದರೂ ಆಗಬಹುದು. ಹೀಗಾಗಿ ಇದರ ಬಗ್ಗೆ ನಾವು ಬಹಳ ವಿಚಾರ ಮಾಡುತ್ತಿದ್ದೇವೆ. ಶಾಸಕರಿಗೆ ತರಬೇತಿ ಕೊಡುವ ವಿಚಾರವನ್ನೂ ಮಾಡುತ್ತಿದ್ದೇವೆ ಎಂದರು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

17/09/2024 07:48 pm

Cinque Terre

34.77 K

Cinque Terre

2

ಸಂಬಂಧಿತ ಸುದ್ದಿ