ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: 'ಸ್ವಚ್ಛತಾ ಹೀ ಸೇವಾ' ಪಾಕ್ಷಿಕ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಚಾಲನೆ

ಉಡುಪಿ: ಉಡುಪಿ ನಗರಸಭೆ ವತಿಯಿಂದ 'ಸ್ವಭಾವ ಸ್ವಚ್ಛತೆ-ಸಂಸ್ಕಾರ ಸ್ವಚ್ಛತೆ' ಎಂಬ ಧೈಯ ವಾಕ್ಯದಲ್ಲಿ ನಡೆಯುತ್ತಿರುವ 'ಸ್ವಚ್ಛತಾ ಹೀ ಸೇವಾ-2024' ಪಾಕ್ಷಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಇಂದು ಮಲ್ಪೆ ವಿಠೋಬಾ ಭಜನಾ ಮಂದಿರದ ಬಳಿ ನಡೆಯಿತು.

ಗಿಡಕ್ಕೆ ನೀರು ಹಾಕುವ ಮೂಲಕ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ 15 ದಿನಗಳ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ದರು. ಬಳಿಕ ಮಾತನಾಡಿದ ಅವರು, ನಮ್ಮ ಸುತ್ತಮುತ್ತ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ನಮ್ಮ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ನಮ್ಮ ಪರಿಸರ ಸ್ವಚ್ಛವಾಗಿದ್ದಾಗ ಆರೋಗ್ಯವನ್ನು ಉತ್ತಮವಾಗಿ ಕಾಯ್ದುಕೊಳ್ಳಲು ಸಾಧ್ಯ ವಾಗುತ್ತದೆ. ಪ್ರತಿಯೊಬ್ಬರು ತಮ್ಮ ತಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಾಗ ಇಡೀ ನಗರ ಸ್ವಚ್ಛವಾಗುತ್ತದೆ. ಈ ಮೂಲಕ ಇಡೀ ಜಿಲ್ಲೆಯನ್ನು ಸ್ವಚ್ಛವಾಗಿಟ್ಟು ಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಅಧ್ಯಕ್ಷತೆಯನ್ನು ಉಡುಪಿ ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ ವಹಿಸಿದ್ದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆಯ ಪರಿಸರ ಅಭಿಯಂತರರಾದ ಸ್ನೇಹಾ ಕೆ.ಎಸ್ ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಮಹತ್ವದ ಪ್ರಮಾಣ ವಚನವನ್ನು ಬೋಧಿಸಿದರು. ಬಳಿಕ ವಿದ್ಯಾರ್ಥಿಗಳು, ನಗರಸಭೆಯ ಅಧಿಕಾರಿ, ಸಿಬ್ಬಂದಿಗಳು, ನಗರಸಭೆಯ ಸದಸ್ಯರು, ಭಜನಾ ಮಂದಿರದ ಪ್ರಮುಖರು ಶ್ರಮದಾನ ಮಾಡಿ ಸುತ್ತಮುತ್ತ ಪರಿಸರವನ್ನು ಸ್ವಚ್ಛಗೊಳಿಸಿದರು.

Edited By : PublicNext Desk
Kshetra Samachara

Kshetra Samachara

17/09/2024 08:04 pm

Cinque Terre

1.68 K

Cinque Terre

0

ಸಂಬಂಧಿತ ಸುದ್ದಿ