ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಬಿ.ಸಿ.ರೋಡ್‌‌ನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಮರುನಿರ್ಮಾಣ - ಸಂಸದ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಮಹತ್ವದ ಸಭೆ

ಬಂಟ್ವಾಳ: ಬಿ.ಸಿ.ರೋಡ್ ಜಂಕ್ಷನ್‌ನಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ವೃತ್ತವನ್ನು ಮಾದರಿ ವೃತ್ತವನ್ನಾಗಿ ಪುನರ್‌ ನಿರ್ಮಾಣ ಮಾಡುವ ಬಗ್ಗೆ ಸಂಸದ ಬ್ರಿಜೇಶ್ ಚೌಟ ಅವರು ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಬಿಲ್ಲವ ಸಮುದಾಯದ ಮುಖಂಡರು ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ಅವರು "ಬಿ.ಸಿ.ರೋಡ್‌ನಲ್ಲಿ ಮರು ನಿರ್ಮಾಣವಾಗಲಿರುವ ನಾರಾಯಣಗುರು ವೃತ್ತ ಸ್ಥಳೀಯರಲ್ಲಿ ತಮ್ಮ ಸರ್ಕಲ್ ಎಂಬ ಭಾವನೆ ಮೂಡಿಸಬೇಕು. ಗುತ್ತಿಗೆದಾರರು ಕೇವಲ ಸರ್ಕಲ್ ನಿರ್ಮಾಣ ಮಾಡುವುದಲ್ಲ ಬದಲಾಗಿ ಸ್ಥಳೀಯ ಜನಾಭಿಪ್ರಾಯ ಸಂಗ್ರಹಿಸಿ ಅದರ ಆಧಾರದಲ್ಲಿ ಈ ವೃತ್ತವನ್ನು ಮಾದರಿ ವೃತ್ತವಾಗಿ ಅಭಿವೃದ್ಧಿಪಡಿಸಬೇಕು. ಆ ಮೂಲಕ ಇದೊಂದು ಬಂಟ್ವಾಳ ಜನತೆಯ ಸರ್ಕಲ್ ಆಗಿ ರೂಪುಗೊಳ್ಳಬೇಕು ಎಂದು ಸಲಹೆ ನೀಡಿದರು.

ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ನಿರ್ಮಾಣದ ಸ್ಥಳದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಹೆದ್ದಾರಿ ಪ್ರಾಧಿಕಾರದವರು ಗುರುತಿಸಿರುವ ಅಷ್ಟೇ ಜಾಗದಲ್ಲಿ ವೃತ್ತವನ್ನು ಪುನರ್‌ ನಿರ್ಮಿಸಬೇಕಾಗುತ್ತದೆ. ಆದರೆ ವೃತ್ತದ ವಿನ್ಯಾಸದಲ್ಲಿ ನಮಗೆ ಬೇಕಾದಂತೆ ಕೆಲವೊಂದು ಬದಲಾವಣೆ ಮಾಡುವುದಕ್ಕೆ ಅವಕಾಶವಿದೆ. ಈ ಸರ್ಕಲ್ ಜಿಲ್ಲೆಯ ಸಂಸ್ಕೃತಿ ಪ್ರತಿಬಿಂಬಿಸುವ ರೀತಿ ರೂಪುಗೊಳ್ಳಬೇಕು ಎಂದು ಸಲಹೆ ನೀಡಿದರು.

ವೃತ್ತ ಮರುನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳೀಯರನ್ನು ಒಳಗೊಂಡ ಸಮಿತಿಯೊಂದನ್ನು ನಿರ್ಮಿಸಲಾಗುತ್ತದೆ. ಈ ಸಮಿತಿಯು ಎಲ್ಲರ ಅಭಿಪ್ರಾಯ ಸಂಗ್ರಹಿಸಿ ವೃತ್ತವನ್ನು ಯಾವ ರೀತಿ ನಿರ್ಮಿಸಬೇಕೆಂಬ ನಿರ್ಧಾರ ತೆಗೆದುಕೊಳ್ಳುತ್ತಾರೆ. ಬಳಿಕ ಅದನ್ನು ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಅಂತಿಮ ರೂಪ ನೀಡಲಾಗುತ್ತದೆ ಎಂದು ಬ್ರಿಜೇಶ್ ಚೌಟ ತಿಳಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

17/09/2024 10:02 pm

Cinque Terre

11.87 K

Cinque Terre

0

ಸಂಬಂಧಿತ ಸುದ್ದಿ