ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮಹಿಳೆಯೊಬ್ಬರ ಚಿನ್ನಾಭರಣ, ನಗದು ಎಗರಿಸಿ ಪರಾರಿಯಾಗಿದ್ದ ಖತರ್ನಾಕ್ ಖದೀಮ ಅರೆಸ್ಟ್

ಮಂಗಳೂರು: ತನ್ನೊಂದಿಗೆ ವಾಸವಿದ್ದ ಮಹಿಳೆಯೊಬ್ಬರ ಚಿನ್ನಾಭರಣ, ನಗದು ಎಗರಿಸಿ ಪರಾರಿಯಾಗಿದ್ದ ಖತರ್ನಾಕ್ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ, ಬೆಳ್ಮಣ್ ನಿವಾಸಿ ರೋಹಿತ್ ಮಥಾಯಸ್ ಬಂಧಿತ ಆರೋಪಿ. ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಕಾಸ್ತಾಲಿನೋ ಕಾಲನಿ ಸೆಕ್ರೆಡ್ ಹಾರ್ಟ್, ಕೊಂಗರು, ಕುಲಶೇಖರ ನಿವಾಸಿ ಮಹಿಳೆಯೊಂದಿಗೆ ವಾಸಮಾಡಿಕೊಂಡಿದ್ದ. ಆರೋಪಿ ರೋಹಿತ್ ಮಥಾಯಸ್‌ನು ಮಹಿಳೆ ಮನೆಯಲ್ಲಿಟ್ಟಿದ್ದ ಚಿನ್ನಾಭರಣ ಮತ್ತು ನಗದನ್ನು ಪರಾರಿಯಾಗಿದ್ದ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು. ಸದ್ಯ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ 7 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿ ರೋಹಿತ್ ಮಥಾಯಸ್ ಹಣ, ಚಿನ್ನಾಭರಣಗಳ ಆಸೆಗಾಗಿ 2019ರಲ್ಲಿ ಬೆಳ್ಮಣ್‌ನ ತನ್ನ ನೆರೆಹೊರೆ ಮನೆಯ ನಿವೃತ್ತ ಪಿಡಿಒ ಭರತಲಕ್ಷ್ಮಿ ಎಂಬವರನ್ನು ಇತರರೊಂದಿಗೆ ಸೇರಿಕೊಂಡು ಕೊಲೆ ಮಾಡಿದ್ದನು. ಬಳಿಕ ಆಕೆಯ ಮೃತದೇಹವನ್ನು ಪ್ಲಾಸ್ಟಿಕ್‌ನಲ್ಲಿ ಸುತ್ತಿ ಎಸೆದು ಕಲ್ಯಾದ ಬಾವಿಗೆ ಎಸೆದಿದ್ದ. ಈ ಪ್ರಕರಣದಲ್ಲಿ ಬಂಧಿತನಾಗಿ ಜೈಲುವಾಸ ಅನುಭವಿಸಿದ್ದಾನೆ. ಬಳಿಕ ಪ್ರಕರಣದ ವಿಚಾರಣೆಗೆ ಸಿಗದೆ 2 ವರ್ಷಗಳಿಂದ ತಲೆಮರೆಸಿಕೊಂಡಿದ್ದನು.

ಈತನು ತನ್ನ ಸಮುದಾಯದ ಮಹಿಳೆಯರನ್ನು ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯಿಸಿಕೊಂಡು ಅವರ ವಿಶ್ವಾಸಗಳಿಸಿ, ಬಳಿಕ ನಗದು, ಚಿನ್ನಾಭರಣಗಳನ್ನು ಕಳವುಗೈದು ಪರಾರಿಯಾಗುವ ಸ್ವಭಾವದವನು ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಈತ ಮುಂಬೈನಿಂದ ಮಂಗಳೂರಿಗೆ ಬಂದಿರುವ ಮಾಹಿತಿ ಆಧಾರದಲ್ಲಿ ಕಂಕನಾಡಿ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Edited By : Vijay Kumar
Kshetra Samachara

Kshetra Samachara

17/09/2024 10:52 pm

Cinque Terre

12.49 K

Cinque Terre

2

ಸಂಬಂಧಿತ ಸುದ್ದಿ