ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉತ್ತರಪ್ರದೇಶದಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ : ಇಬ್ಬರು ಮಕ್ಕಳು ಸೇರಿ ಐವರು ಸಾವು

ಫಿರೋಜಾಬಾದ್: ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ, ಇಬ್ಬರು ಮಕ್ಕಳು, ಮಹಿಳೆ ಸೇರಿದಂತೆ ಐವರು ಸಾವನ್ನಪ್ಪಿದ್ದು ಹಲವು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಶಿಕೋಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ನೌಶೇರಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಸೋಮವಾರ ರಾತ್ರಿ 10:30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೃತರನ್ನು ಮೀರಾದೇವಿ(52), ಅಮನ್(20), ಗೌತಮ್ ಕುಶ್ವಾಹ(18), ಇಚ್ಛಾ ಕುಮಾರಿ(03) ಮತ್ತು ಅಭಿನೇಯ (1.5) ವರ್ಷ ಎಂದು ಗುರುತಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

Edited By : Abhishek Kamoji
PublicNext

PublicNext

18/09/2024 08:16 am

Cinque Terre

108.2 K

Cinque Terre

4