ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ : ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ - 15ಕ್ಕೂ ಅಧಿಕ ಜನರಿಗೆ ಗಾಯ‌

ಹಾವೇರಿ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಅಧಿಕ ಜನರಿಗೆ ಸಣ್ಣಪುಟ್ಟ ಗಾಯ‌ಗಳಾದ ಘಟನೆ ಹಾವೇರಿ ಸಮೀಪದ ವರದಾಹಳ್ಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.

ಭಾರಿ ಅನಾಹುತ ತಪ್ಪಿದ್ದು ಪ್ರಯಾಣಿಕರು ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾವೇರಿ ತಾಲ್ಲೂಕಿನ ವರದಾಹಳ್ಳಿ ಗ್ರಾಮದ ಬಳಿ ಇರೋ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಘಟನೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಸರ್ವಿಸ್ ರಸ್ತೆಗೆ ಖಾಸಗಿ ಬಸ್ ಪಲ್ಟಿಯಾಗಿದೆ. ಬಸ್ ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿತ್ತು. ನಸುಕಿನ ವೇಳೆ ಚಾಲಕ ನಿದ್ರೆ ಮಂಪರಿನಲ್ಲಿ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದೆ.

Edited By : Nagesh Gaonkar
PublicNext

PublicNext

18/09/2024 09:00 am

Cinque Terre

38.37 K

Cinque Terre

0