ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ರಾಷ್ಟ್ರೀಯ ಲೋಕ ಅದಾಲತ್ 3,122 ಪ್ರಕರಣಗಳು ಇತ್ಯರ್ಥ

ಮಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಸೆಪ್ಟೆಂಬರ್ 14ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ದ.ಕ ಜಿಲ್ಲೆಯಾದ್ಯಂತ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಪ್ರಕರಣಗಳ ಪೈಕಿ 3,122 ಪ್ರಕರಣಗಳು ಹಾಗೂ 23,734 ವ್ಯಾಜ್ಯಪೂರ್ವ ಪ್ರಕರಣಗಳು ರಾಜ್ಯ ಸಂಧಾನದ ಮೂಲಕ ಇತ್ಯರ್ಥಗೊಂಡಿದೆ.

ಇದೇ ಸಂದರ್ಭದಲ್ಲಿ ಕೌಟುಂಬಿಕ ಕಲಹದ ಎರಡು ಪ್ರಕರಣಗಳಲ್ಲಿ ದಂಪತಿಗಳು ರಾಜಿ ಸಂಧಾನದ ಮೂಲಕ ಲೋಕ್ ಅದಾಲತ್‌ ನಲ್ಲಿ ಒಂದುಗೂಡಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ನ್ಯಾಯಾಧೀಶ ರವೀಂದ್ರ ಎಂ ಜೋಶಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

18/09/2024 11:28 am

Cinque Terre

782

Cinque Terre

0

ಸಂಬಂಧಿತ ಸುದ್ದಿ