ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿರತೆ ಪ್ರತ್ಯಕ್ಷ ಜನರಲ್ಲಿ ಹೆಚ್ಚಿದ ಆತಂಕ..!!

ಅಂಕರ್ : ಎಲೆಕ್ಟ್ರಾನಿಕ್ ಸಿಟಿ ಬಳಿ ಚಿರತೆ ಕಾಣಿಸಿಕೊಂಡು ಸುತ್ತಮುತ್ತಲಿನ ಪ್ರದೇಶದ ಜನರಿಗೆ ಆತಂಕ ಶುರುವಾಗಿದೆ. ಇಂದು ಮುಂಜಾನೆ 3 ಗಂಟೆ ವೇಳೆಗೆ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಬಳಿ ಚಿರತೆಯೊಂದು ಪನಕ್ ಇಂಡಿಯಾ ಕಂಪನಿ ಪ್ರದೇಶದಿಂದ ನೆಟ್ಟೂರು ತಾಂತ್ರಿಕ ತರಬೇತಿ ಪ್ರತಿಷ್ಠಾನ ಮೈದಾನದ ಮೂಲಕ ಹಾದು ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಚಿರತೆ ಬಂದು ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯ ನೋಡಿ ಐಟಿ ಬಿಟಿ ಉದ್ಯೋಗಿಗಳು ಆತಂಕಕ್ಕೆ ಈಡಾಗಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಎನ್‌ಟಿಟಿಎಫ್ ಆವರಣ ಹಾಗೂ ಸುತ್ತಮುತ್ತ ಚಿರತೆಗಾಗಿ ಹುಡುಕಾಟ ನಡೆಸಿದರು. ಕಾಲೇಜಿನ ಆವರಣದಲ್ಲಿರುವ ಸಿಸಿಟಿವಿ ಹಾಗೂ ಕೊಠಡಿಗಳನ್ನು ಜಾಲಾಡಿದ್ದಾರೆ, ಆದರೆ ಚಾಲಾಕಿ ಚಿರತೆ ಮಾತ್ರ ಪತ್ತೆ ಆಗಿಲ್ಲ.ಮತ್ತೆ ಚಿರತೆಗಾಗಿ ಹುಡುಕಾಟ ನಡೆಸುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Edited By : Suman K
Kshetra Samachara

Kshetra Samachara

18/09/2024 12:29 pm

Cinque Terre

486

Cinque Terre

0