ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕಿಲ್ಲರ್ ಬೈಪಾಸ್‌ನಲ್ಲಿ ಭೀಕರ ಅಪಘಾತ - ಓರ್ವ ಸ್ಥಳದಲ್ಲೇ ಸಾವು, ಇನ್ನೊಬ್ಬನ ಕಾಲು ಕಟ್

ಹುಬ್ಬಳ್ಳಿ: ಬೊಲೆರೋ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕ್ಯಾಂಟರ್ ವಾಹನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಬೊಲೆರೋ ವಾಹನದ ಚಾಲಕನ ಕಾಲುಗಳ ಕಟ್ ಆದ ಘಟನೆ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಬೆಳಗಾವಿ ಕಡೆಯಿಂದ ಹಾವೇರಿ ಕಡೆಗೆ ಹೋಗುತ್ತಿದ್ದ ಕ್ಯಾಂಟರ್ ವಾಹನಕ್ಕೆ ಹುಬ್ಬಳ್ಳಿಯಿಂದ ಬೆಳಗಾವಿ ಕಡೆಗೆ ಹೊರಟಿದ್ದ ಬೊಲೆರೋ ವಾಹನ ತಾರಿಹಾಳ ಬ್ರಿಡ್ಜ್ ಬಳಿಯಲ್ಲಿ ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ವಾಹನ ಚಾಲನೆ ಮಾಡುತ್ತಿದ್ದ ರಾಣೇಬೆನ್ನೂರು ಮೂಲದ ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಸಂಚಾರಿ ವಿಭಾಗದ ಡಿಸಿಪಿ ರವೀಶ್ ಹಾಗೂ ದಕ್ಷಿಣ ಸಂಚಾರಿ ಠಾಣೆಯ ಇನ್ಸ್ಪೆಕ್ಟರ್ ಮರಳುಸಿದ್ಧಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಿದ್ದು, ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Abhishek Kamoji
Kshetra Samachara

Kshetra Samachara

18/09/2024 01:42 pm

Cinque Terre

19.28 K

Cinque Terre

1

ಸಂಬಂಧಿತ ಸುದ್ದಿ