ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪ್ರಾಕೃತಿಕ ವಿಕೋಪ ಸಂದರ್ಭ ಸೇವೆ- 450 ಸಿಬ್ಬಂದಿಗಳಿಗೆ ಅಭಿನಂದನಾ ಕಾರ್ಯಕ್ರಮ

ಉಡುಪಿ: ಪ್ರಾಕೃತಿಕ ವಿಕೋಪಗಳು ಸಂಬಂಧಿಸಿದಾಗ ಸ್ಥಳೀಯಾಡಳಿತ ಜೊತೆಗೆ ಪರಿಹಾರ ಕಾರ್ಯಾಚರಣೆಯಲ್ಲಿ ಹಗಲಿರುಳು ಶ್ರಮಿಸಿ ಸಾರ್ವಜನಿಕರ ಸೇವೆಗೆ ಶೀಘ್ರವಾಗಿ ಸ್ಪಂದಿಸುವ ವಿವಿಧ ಇಲಾಖೆಗಳ ಸಿಬ್ಬಂದಿ ಹಾಗೂ ಸ್ವಯಂ ಸೇವಕರ ಕಾರ್ಯ ಅಭಿನಂದನಾರ್ಹ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಪ್ರಾಕೃತಿಕ ವಿಕೋಪ ನಿರ್ವಹಣೆಯಲ್ಲಿ ಮುಂಚೂಣಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ ಮೆಸ್ಕಾಂ, ಅರಣ್ಯ, ಅಗ್ನಿಶಾಮಕ ದಳ, ಪೌರ ಕಾರ್ಮಿಕರು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಶೌರ್ಯ ತಂಡದ ಸದಸ್ಯರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಆಯೋಜಿಸಿದ್ದ ಗೌರವಾರ್ಪಣೆ ಹಾಗೂ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮಾರಂಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಯ ಸುಮಾರು 450 ಮುಂಚೂಣಿ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಲಾಯಿತು.ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು, ಶ್ರೀಮತಿ ವನಜ ಪೂಜಾರ್ತಿ, ಉಡುಪಿ ನಗರಸಭೆ ಉಪಾಧ್ಯಕ್ಷರಾದ ಶ್ರೀಮತಿ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಸುಂದರ ಕಲ್ಮಾಡಿ, ಗಣ್ಯರಾದ ಉದಯ ಕುಮಾರ್ ಶೆಟ್ಟಿ ಕಿದಿಯೂರು ಮತ್ತಿತರರಿದ್ದರು.

Edited By : PublicNext Desk
Kshetra Samachara

Kshetra Samachara

18/09/2024 03:11 pm

Cinque Terre

746

Cinque Terre

0

ಸಂಬಂಧಿತ ಸುದ್ದಿ