ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ರಸ್ತೆ ಅಪಘಾತ - ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಸಾವು

ಪುತ್ತೂರು: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ದೇರಳಕಟ್ಟೆಯಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತ ಮಹಿಳೆಯನ್ನು ಪುತ್ತೂರು ಕೋಡಿಂಬಾಡಿ ಗ್ರಾಮದ ಸೇಡಿಯಾಪು ಸಮೀಪದ ಬದಿನಾರು ನಿವಾಸಿ ಧರ್ಮಪಾಲ ಗೌಡ ಎಂಬವರ ಪತ್ನಿ ಸುಂದರಿ(52) ಎಂದು ಗುರುತಿಸಲಾಗಿದೆ.

ಸೆ.10ರಂದು ಸುಂದರಿ ತನ್ನ ಪುತ್ರಿಯೊಂದಿಗೆ ಸ್ಕೂಟರ್‌ನಲ್ಲಿ ಸಂಬಂಧಿಕರ ಮನೆಗೆ ಹೋಗುತ್ತಿದ್ದ ವೇಳೆ ಬಂಟ್ವಾಳ ತಾಲೂಕಿನ ವಿಟ್ಲ-ಸಾಲೆತ್ತೂರು ರಸ್ತೆಯಲ್ಲಿನ ಕೊಲ್ನಾಡು ಎಂಬಲ್ಲಿ ಸ್ಕಿಡ್ ಆಗಿ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರು ಪತಿ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Edited By : PublicNext Desk
Kshetra Samachara

Kshetra Samachara

18/09/2024 04:19 pm

Cinque Terre

576

Cinque Terre

0

ಸಂಬಂಧಿತ ಸುದ್ದಿ