ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಒಂದು ದೇಶ, ಒಂದು ಚುನಾವಣೆಯಿಂದ ತೆರಿಗೆ ಹಣ ಉಳಿಯಲಿದೆ - ಆರ್ ಅಶೋಕ್

ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಭಯದಿಂದಾಗಿ ಕಾಂಗ್ರೆಸ್‌ ಈ ಕ್ರಮವನ್ನು ವಿರೋಧಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.

ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ಇದರಿಂದ ತೆರಿಗೆದಾರರ ಹಣ ಉಳಿತಾಯವಾಗುತ್ತದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಸಭೆ, ಲೋಕಸಭೆ ಹೀಗೆ ಒಂದೊಂದು ಚುನಾವಣೆ ಒಮ್ಮೊಮ್ಮೆ ನಡೆದಾಗ ನೀತಿ ಸಂಹಿತೆ ಜಾರಿಯಾಗುತ್ತದೆ. ಇದರಿಂದಾಗಿ ಕಾಮಗಾರಿಗಳು ವಿಳಂಬವಾಗಿ ಸರ್ಕಾರ ಯಾವುದೇ ಯೋಜನೆಯನ್ನು ಸರಿಯಾಗಿ ಜಾರಿ ಮಾಡಲು ಸಾಧ್ಯವಾಗುವುದಿಲ್ಲ. ಹೊಸ ಕ್ರಮದಿಂದ ಈ ಸಮಸ್ಯೆ ನಿವಾರಣೆಯಾಗಲಿದೆ ಎಂದರು.

ಕಾಂಗ್ರೆಸ್‌ ಮತ್ತು ಕಮ್ಯುನಿಸ್ಟ್‌ ಪಕ್ಷಗಳು ಇಂತಹ ಕ್ರಮಕ್ಕೆ ವಿರೋಧ ಮಾಡುವುದು ಸಹಜ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಒಟ್ಟಿಗೆ ನಡೆದರೆ, ಸಮಸ್ಯೆಯಾಗುತ್ತದೆ ಎಂದು ಅವರು ಹೆದರಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಅವರಿಗೆ ಮೋದಿಯವರ ಭಯವಿದೆ. ಈ ಕ್ರಮದಿಂದಾಗಿ ಪ್ರಧಾನಿ ಮತ್ತು ಮುಖ್ಯಮಂತ್ರಿಗೆ ಐದು ವರ್ಷಗಳ ಸಂಪೂರ್ಣ ಅವಧಿ ದೊರೆಯುತ್ತದೆ. ಆ ದೃಷ್ಟಿಯಿಂದ ಇದು ಉತ್ತಮ ಕ್ರಮ ಎಂದರು.

Edited By : Shivu K
PublicNext

PublicNext

18/09/2024 06:26 pm

Cinque Terre

15.44 K

Cinque Terre

0