ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ಜಾಲ ನಿಯಂತ್ರಿಸಿಲು ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ - ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಡ್ರಗ್ಸ್ ಜಾಲ ನಿಯಂತ್ರಿಸಲು ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡೋದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಡ್ರಗ್ಸ್ ನಿಯಂತ್ರಣ ಕುರಿತು ಹಿರಿಯ ಸಚಿವರು ಮತ್ತು ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ,ರಾಜ್ಯದಲ್ಲಿ ಡ್ರಗ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನಿಸಿದ್ದೇವೆ ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡ್ತೀವಿ, ಈ ಟಾಸ್ಕ್ ಫೋರ್ಸ್ ನಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರುಗಳು ಇರಲಿದ್ದಾರೆ ಎಂದು ಮಾಹಿತಿ ನೀಡಿದರು.

ಸ್ಟೇಷನ್ ಅಧಿಕಾರಿಗಳಿಗೆ ಗೊತ್ತಿಲ್ಲದೆ ಡ್ರಗ್ ದಂಧೆ ನಡೆಯಲು ಸಾಧ್ಯವಿಲ್ಲ. ಹೀಗಾಗಿ ಠಾಣಾಧಿಕಾರಿ ಡಿವೈಎಸ್ ಪಿ, ಎಸಿಪಿ ಮತ್ತು SP ಗಳನ್ನು ಹೊಣೆ ಮಾಡಲು ತೀರ್ಮಾನಿಸಿದ್ದೇವೆ. ಇವರ ವಿರುದ್ಧವೇ ಕ್ರಮ ಖಚಿತ ಎಂದು ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ ನೀಡಿದ್ದಾರೆ.

ಅಗತ್ಯಬಿದ್ದರೆ ಹೊಸ ಕಾನೂನು ಮಾಡ್ತೇವೆ. ಇರುವ ಕಾನೂನನ್ನು ಇನ್ನಷ್ಟು ಗಟ್ಟಿ ಮಾಡ್ತೇವೆ ಪೆಡ್ಲರ್ ಗಳಿಗೆ ಜೀವಾವಧಿ ಶಿಕ್ಷೆಯವರೆಗೂ ಕಠಿಣ ಶಿಕ್ಷೆ ವಿಧಿಸಲು ಕಾನೂನು ತಿದ್ದುಪಡಿಗೆ ಕ್ರಮಕೈಗೊಳ್ಳು ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ.

ಡ್ರಗ್ ಜಾಲ ತಡೆಗಟ್ಟಲು NCC, NGO ಗಳನ್ನು ಬಲಗೊಳಿಸುವುದನ್ನು ಗುರಿಯಾಗಿಸಿಕೊಂಡಿದ್ದೇವೆ, ಪುನರ್ವಸತಿ ಕೇಂದ್ರಗಳನ್ನು ಹೆಚ್ಚಿಸಲು, ಸಮರ್ಪಕಗೊಳಿಸಲು ಕ್ರಮವಹಿಸಲಿದ್ದೇವೆ ಎಂದು ತಿಳಿಸಿದರು.ವಿದ್ಯಾರ್ಥಿ, ಯುವ ಜನರ ಮೇಲೆ, ಕುಟುಂಬಗಳ ಮೇಲೆ ಕೆಟ್ಟ ಪರಿಣಾಮ ಬೀರುತಗತಿರುವುದನ್ನು ತಡೆಯಲು ಪ್ರಮುಖವಾಗಿ ಕ್ರಮವಹಿಸಲಿದ್ದೇವೆ.

ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಡುವ ಜೊತೆಗೆ ಅವರನ್ನೇ ಹೊಣೆ ಮಾಡಿ ಕ್ರಮ ಕೂಡ ತಗೊತೀವಿ,ಅಲ್ದೇ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಮತ್ತು ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರವಾಗಿ ನಡೆಸಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

Edited By : Manjunath H D
PublicNext

PublicNext

18/09/2024 06:29 pm

Cinque Terre

16.41 K

Cinque Terre

1