ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಒಂದು ರಾಷ್ಟ್ರ, ಒಂದು ಚುನಾವಣೆ ಐತಿಹಾಸಿಕ ಹೆಜ್ಜೆ ಎಂದ ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಒಂದು ರಾಷ್ಟ್ರ, ಒಂದು ಚುನಾವಣೆ ಭಾರತೀಯ ಚುನಾವಣಾ ವ್ಯವಸ್ಥೆ ಸುಧಾರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇರಿಸಿರುವ ಐತಿಹಾಸಿಕ ಹೆಜ್ಜೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಬಣ್ಣಿಸಿದ್ದಾರೆ.

ಒಂದು ರಾಷ್ಟ್ರ, ಒಂದು ಚುನಾವಣೆ ಭಾರತೀಯ ಚುನಾವಣಾ ವ್ಯವಸ್ಥೆಯನ್ನು ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷ ಸ್ವಾಗತಿಸುತ್ತದೆ ಎಂದು ಸಚಿವರು ಇದೇ ವೇಳೆ ತಿಳಿಸಿದರು.

ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಬಗ್ಗೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಸಮಿತಿ ವರದಿ ನೀಡಿದೆ. ಈ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕುಮಾರಸ್ವಾಮಿ ಹೇಳಿದರು.

ನರೇಂದ್ರ ಮೋದಿ ಅವರ ಸರ್ಕಾರ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದಂತೆಯೇ ಸಂಪುಟವು ಈ ಐತಿಹಾಸಿಕ ನಿರ್ಧಾರ ಕೈಗೊಂಡಿದೆ ಎಂದು ಅವರು ಹೇಳಿದರು.

Edited By : Nagaraj Tulugeri
PublicNext

PublicNext

18/09/2024 07:07 pm

Cinque Terre

24.75 K

Cinque Terre

3

ಸಂಬಂಧಿತ ಸುದ್ದಿ