ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: "ಒಂದು ರಾಷ್ಟ್ರ, ಒಂದು ಚುನಾವಣೆ ಹಾಸ್ಯಾಸ್ಪದ"- ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಮ್ಮ ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಅವರು “ಆಪರೇಷನ್ ಕಮಲಕ್ಕೆ ಮೂಲದಾತರಾದ ಬಿಜೆಪಿಯವರೇ ಒಂದು ರಾಷ್ಟ, ಒಂದು ಚುನಾವಣೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಅನೇಕ ರಾಜ್ಯಗಳಲ್ಲಿ ಸರ್ಕಾರಗಳನ್ನು ಅಸ್ಥಿರಗೊಳಿಸಲು ಬಿಜೆಪಿಯವರು ಮುಂದಾಗಿದ್ದಾರೆ. ಪ್ರಾದೇಶಿಕ ಪಕ್ಷಗಳು ಬೆಳೆಯುತ್ತಿರುವುದನ್ನು ತಡೆಯಲು ಕೇಂದ್ರದ ಬಿಜೆಪಿ ಸರ್ಕಾರ ಈ ಹುನ್ನಾರ ಮಾಡಿದೆ. ದೇಶದಲ್ಲಿ ಎಲ್ಲಾ ಪಕ್ಷಗಳಿಗೂ ಅವಕಾಶ ಸಿಗಬೇಕು. ಈ ಹಿಂದೆಯೂ ಒಂದು ರಾಷ್ಟ್ರ, ಒಂದು ಚುನಾವಣೆ ವ್ಯವಸ್ಥೆ ನಮ್ಮಲ್ಲಿತ್ತು. 

ನಮ್ಮ ರಾಜ್ಯದಲ್ಲಿಯೂ ಒಟ್ಟಿಗೆ ಚುನಾವಣೆ ಮಾಡಲಾಯಿತು. ಅನಂತರ ಸಾಧ್ಯವಾಗಲಿಲ್ಲ. ಏಕೆಂದರೆ ಒಂದಷ್ಟು ಸರ್ಕಾರಗಳು ಕ್ಯಾಬಿನೆಟ್ ನಲ್ಲಿ ಆರು ಹಾಗೂ ಮೂರು ತಿಂಗಳು ಮುಂಚಿತವಾಗಿಯೇ ಚುನಾವಣೆಗೆ ಹೋಗುತ್ತೇವೆ ಎಂದರು. ಒಂದಷ್ಟು ರಾಜ್ಯಗಳಲ್ಲಿ ಸರ್ಕಾರಗಳೇ ವಿಸರ್ಜನೆಗೊಂಡವು. ಹೀಗಿರುವಾಗ ಈ ವ್ಯವಸ್ಥೆಯನ್ನು ಜಾರಿಗೆ ತರಲು ಹೇಗೆ ಸಾಧ್ಯ? ಎಂದರು.

ಬಿಜೆಪಿ ಈ ಪ್ರಯತ್ನ ಮಾಡುತ್ತಿರುವುದು ಸರಿಯಿಲ್ಲ. ಅಲ್ಲದೇ ಮೂರನೇ ಒಂದರಷ್ಟು ಬಹುಮತವೂ ಅವರಿಗಿಲ್ಲ. ಹೀಗಿರುವಾಗ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದು ಒಮ್ಮತದ ಅಭಿಪ್ರಾಯ ಕೇಳಲಿ. ಇದರ ಹೊರತು ಇಂತಹ ಪ್ರಸ್ತಾವನೆಗಳು ವ್ಯರ್ಥ.

ಮೊದಲು ಮಹಿಳಾ ಮೀಸಲಾತಿ ಬಗ್ಗೆ ಕ್ರಮ ತೆಗೆದುಕೊಳ್ಳಲಿ. ಕ್ಷೇತ್ರ ವಿಂಗಡಣೆಗೆ ಕ್ರಮ ತೆಗೆದುಕೊಳ್ಳಲಿ. ಒಂದು ಚುನಾವಣೆ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಅರ್ಥಪೂರ್ಣ ಮಾತಿಗೆ ನಮ್ಮ ಒಮ್ಮತದ ಒಪ್ಪಿಗೆಯಿದೆ” ಎಂದರು.

Edited By : Manjunath H D
PublicNext

PublicNext

18/09/2024 07:28 pm

Cinque Terre

126.93 K

Cinque Terre

17

ಸಂಬಂಧಿತ ಸುದ್ದಿ