ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಡ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ನೀಡಲು 'ವಿಪ್ರೋ' ನಿರ್ಧಾರ

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ಕೊಟ್ಟು ಶೈಕ್ಷಣಿಕವಾಗಿ ಉತ್ತೇಜಿಸಲು ವಿಪ್ರೋ ಸಂಸ್ಥೆ ನಿರ್ಧರಿಸಿದೆ.

ಸರ್ಕಾರಿ ಶಾಲೆಯಲ್ಲಿ ಹತ್ತನೇ ತರಗತಿ ಹಾಗೂ ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿರುವ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಯರಿಗೆ ಮುಂದಿನ ಅಧ್ಯಯನಕ್ಕಾಗಿ ವಿದ್ಯಾರ್ಥಿ ವೇತನ ದೊರೆಯಲಿದೆ. ಇದಕ್ಕಾಗಿ ಶೇಕಡಾವಾರು ಅಂಕಗಳನ್ನು ಅರ್ಹತೆಯಾಗಿ ಪರಿಗಣಿಸುವುದಿಲ್ಲ. ಉತ್ತೀರ್ಣಕ್ಕೆ ಬೇಕಾಗಿರುವ ಅಂಕ ತಗೆದುಕೊಂಡಿದ್ದರೂ ಸಾಕು.

ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ವಾರ್ಷಿಕ 24 ಸಾವಿರ ರೂ. ವಿದ್ಯಾರ್ಥಿ ವೇತನ ನೀಡಲಾಗುವುದು. ಸರ್ಕಾರಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವ್ಯಾಸಂಗ ಮಾಡಿದ, ಆರ್ಥಿಕವಾಗಿ ಹಿಂದುಳಿದವರು ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿ ವೇತನವನ್ನು ಶೇ. 60ರಷ್ಟು ಭಾಗ ಮಾನವಿಕ ವಿಷಯ, ಕಲಾ ವಿಷಯ, ವಿಜ್ಞಾನ ವಿಷಯಗಳಲ್ಲಿ ಪದವಿ ಅಭ್ಯಾಸ ಮಾಡುವವರಿಗೆ ಆದ್ಯತೆ ಮೇರೆಗೆ ನೀಡಲಾಗುತ್ತದೆ. ಉಳಿದ ಶೇ. 40ರಷ್ಟನ್ನು ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಪದವಿ ಪಡೆಯುವವರನ್ನು ಪರಿಗಣಿಸಲಾಗುತ್ತದೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಸಿಇಒ ತಿಳಿಸಿದ್ದಾರೆ.

ಪ್ರಸಕ್ತ ವರ್ಷ 1,500 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಈ ಪೈಕಿ ಮೈಸೂರು ಜಿಲ್ಲೆಯ 380 ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ನೀಡಲು ಉದ್ದೇಶಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ. 30 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ 74116 54395, 73378 35166ಕ್ಕೆ ಸಂಪರ್ಕಿಸಬಹುದು.

Edited By : Nagaraj Tulugeri
PublicNext

PublicNext

18/09/2024 10:32 pm

Cinque Terre

55.96 K

Cinque Terre

5

ಸಂಬಂಧಿತ ಸುದ್ದಿ