ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು : ರೈಲು ಸೇವೆಯಲ್ಲಿ ವ್ಯತ್ಯಯ

ಮಂಗಳೂರು: ಪಾಲಕ್ಕಾಡ್ ರೈಲ್ವೇ ವಿಭಾಗದ ವಿವಿಧ ಪ್ರದೇಶಗಳಲ್ಲಿ ಹಳಿ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ.

ಸೆ. 19ರಂದು ಡಾ|ಎಂಜಿಆರ್ ಚೆನ್ನೈ ಸೆಂಟ್ರಲ್‌ನಿಂದ ಮಂಗಳೂರು ಸೆಂಟ್ರಲ್‌ಗೆ ಆಗಮಿಸುವ ನಂ. 22637 ವೆಸ್ಟ್ ಕೋಸ್ಟ್ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲನ್ನು 2 ಗಂಟೆ 10 ನಿಮಿಷಗಳ ಕಾಲ ನಿಯಂತ್ರಿಸಲಾಗಿದೆ. ಆದೇ ದಿನ ಚೆನ್ನೈ ಸೆಂಟ್ರಲ್‌ನಿಂದ ಮಂಗಳೂರು ಸೆಂಟ್ರಲ್‌ಗೆ ಆಗಮಿಸುವ ರೈಲು ಸಂಖ್ಯೆ 12685 ಸೂಪ‌ರ್ ಫಾಸ್ಟ್ ಎಕ್ಸ್‌ಪ್ರೆಸ್‌ ರೈಲನ್ನು 40 ನಿಮಿಷಗಳ ಕಾಲ ನಿಯಂತ್ರಿಸಲಾಗಿದೆ.

ಸೆ. 19ರಂದು ತಿರುವನಂತಪುರಂ ಸೆಂಟ್ರಲ್‌ನಿಂದ ಮಂಗಳೂರು ಸೆಂಟ್ರಲ್ ಗೆ ಆಗಮಿಸುವ ನಂ. 16604 ಮಾವೇಲಿ ಎಕ್ಸ್‌ಪ್ರೆಸ್ ರೈಲು 30 ನಿಮಿಷಗಳ ಕಾಲ ವ್ಯತ್ಯಯವಾಗಲಿದೆ.

ಸೆ. 20ರಂದು ಡಾ| ಎಂಜಿಆರ್ ಚೆನ್ನೈ ಸೆಂಟ್ರಲ್‌ನಿಂದ ಮಂಗಳೂರು ಸೆಂಟ್ರಲ್‌ಗೆ ಆಗಮಿಸುವ ರೈಲು ಸಂಖ್ಯೆ 22637 ವೆಸ್ಟ್ ಕೋಸ್ಟ್ ಸೂಪರ್ ಫಾಸ್ಟ್‌ ಎಕ್ಸ್‌ಪ್ರೆಸ್ ರೈಲು ಸೇವೆ 1 ಗಂಟೆ 30 ನಿಮಿಷಗಳ ಕಾಲ ವ್ಯತ್ಯಯವಾಗಲಿದೆ.

ಸೆ. 21ರಂದು ಡಾ| ಎಂಜಿಆರ್ ಚೆನ್ನೈ ಸೆಂಟ್ರಲ್‌ನಿಂದ ಮಂಗಳೂರು ಸೆಂಟ್ರಲ್‌ಗೆ ಆಗಮಿಸುವ ರೈಲು ಸಂಖ್ಯೆ 22637 ವೆಸ್ಟ್ ಕೋಸ್ಟ್ ಸೂಪ‌ರ್ ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲು ಸೇವೆ 1 ಗಂಟೆ ಕಾಲ ವ್ಯತ್ಯಯವಾಗಲಿದೆ.

ಸೆ. 27ರಂದು ಮಂಗಳೂರು ಸೆಂಟ್ರಲ್‌ನಿಂದ ಡಾ| ಎಂಜಿಆರ್ ಚೆನ್ನೈ ಸೆಂಟ್ರಲ್ ಗೆ ತೆರಳುವ ನಂ. 22638 ವೆಸ್ಟ್ ಕೋಸ್ಟ್ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್‌ ರೈಲು ಸೇವೆ 30 ನಿಮಿಷಗಳ ಕಾಲ ವ್ಯತ್ಯಯವಾಗಲಿದೆ ಎಂದು ರೈಲ್ವೇ ಇಲಾಖೆ ಪ್ರಕಟನೆ ತಿಳಿಸಿದೆ.

Edited By : PublicNext Desk
Kshetra Samachara

Kshetra Samachara

19/09/2024 11:13 am

Cinque Terre

1.94 K

Cinque Terre

0

ಸಂಬಂಧಿತ ಸುದ್ದಿ