ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್

ಮಂಗಳೂರು: ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಕಾವೂರು ಠಾಣಾ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಮಾದಕದ್ರವ್ಯವನ್ನು ವಶಪಡಿಸಲಾಗಿದೆ.

ಕಾಸರಗೋಡಿನ ಮೇಘನಾಥ ಟಿ. (19), ಕೇರಳ ಕಯ್ಯಾರಿನ ಶ್ರೀಶಾಂತ್(18) ಮತ್ತು ಸಯೂಜ್ ಎಂ(20) ಬಂಧಿತ ಆರೋಪಿಗಳು.

ಪೊಲೀಸರು ಮಾಲಾಡಿ ಕೋರ್ಟ್ ರಸ್ತೆಯಿಂದ ಗೋಲ್ಡ್‌ಫಿಂಚ್ ಮೈದಾನದ ಕಡೆಗೆ ಹೋಗುತ್ತಿದ್ದ ವೇಳೆ ಅನುಮಾನಾಸ್ಪದವಾಗಿ ನಿಂತಿದ್ದ ಮೂವರನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಈ ವೇಳೆ ಆರೋಪಿಗಳು ಮಾದಕದ್ರವ್ಯವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು ಎಂದು ಪೊಲೀಸರಿಗೆ ತಿಳಿದು ಬಂದಿದೆ. ತಕ್ಷಣ ಪೊಲೀಸರು ಮೂವರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

19/09/2024 11:58 am

Cinque Terre

2.29 K

Cinque Terre

1

ಸಂಬಂಧಿತ ಸುದ್ದಿ