ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರ : ಆದೇಶ ಕಾಯ್ದಿರಿಸಿದ ನ್ಯಾಯಾಧೀಶರು

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯ ವಾದ ಪ್ರತಿವಾದ ಮುಕ್ತಾಯವಾಗಿದೆ. ಹೈ ಕೋರ್ಟ್‌ನ ಜನಪ್ರತಿನಿಧಿಗಳ ಪೀಠದಲ್ಲಿ ಎರಡು ಕೇಸ್ ಗಳಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಹಾಗು ಒಂದು ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿಗಾಗಿ ಪ್ರಜ್ವಲ್ ಅರ್ಜಿ ಸಲ್ಲಿಸಿದ್ರು ಈ ವಿಚಾರ ವಾದ ಪ್ರತಿವಾದ ಮುಗಿದಿದ್ದು ಆದೇಶ ಕಾಯ್ದಿರಿಸಲಾಗಿದೆ.

ಪ್ರಜ್ವಲ್ ಪರ ಹಿರಿಯ ವಕೀಲ ಪ್ರಭುಲಿಂಗ ನಾವಡಗಿ ವಾದ ಮಂಡಿಸಿ, ಇದೊಂದು ರಾಜಕೀಯ ಷಡ್ಯಂತ್ರ್ಯವಾಗಿದ್ದು, ಮೂರ್ನಾಲ್ಕು ವರ್ಷಗಳ ಹಿಂದೆ ಅತ್ಯಾಚಾರವಾಗಿದ್ದ ಬಗ್ಗೆ ಉಲ್ಲೇಖಿಸಿದ್ದಾರೆ. ಅತ್ಯಾಚಾರ ನಡೆದಾಗಲೆ ಯಾಕೆ ದೂರು ನೀಡಿರಲಿಲ್ಲ. ಇದೊಂದು ದುರುದ್ದೇಶಪೂರ್ವಕ ದೂರಾಗಿದ್ದು, ತನಿಖೆಗೆ ಸ್ಪಂದಿಸಿ, ಕಳೆದ ನಾಲ್ಕು ತಿಂಗಳಿಂದ ಜೈಲಲಿದ್ದಾರೆ.

ಹೀಗಾಗಿ ಜಾಮೀನು ನೀಡುವಂತೆ ವಾದ ಮಂಡಿಸಿದ್ರು. ಇದಕ್ಕೆ ಪ್ರತಿ ವಾದ ಸಲ್ಲಿಸಿದ್ದ ಎಸ್ ಪಿ ಪಿ ಪ್ರೊ ರವಿವರ್ಮಕುಮಾರ್, ಆರೋಪಿ ಸಾಕ್ಷಿನಾಶ ಪಡಿಸಿದ್ದು, ಈವರೆಗೂ ತನಿಖೆಗೆ ಮೊಬೈಲ್ ಕೊಟ್ಟಿಲ್ಲ. ಎಫ್ ಐ ಆರ್ ದಾಖಲಾಗ್ತಿದ್ದಂತೆ ವಿದೇಶಕ್ಕೆ ಹಾರಿ ತಲೆ ಮರೆಸಿಕೊಂಡಿದ್ರು.

ಪ್ರಭಾವಿಯಾಗಿದ್ದು ಜಾಮೀನಿನ ಮೇಲೆ ಹೊರ ಬಂದ್ರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರ್ತಾರೆ. ಹೀಗಾಗಿ ಜಾಮೀನು ನೀಡಬಾರದು ಅಂತ ಪ್ರತಿವಾದ ಮಂಡಿಸಿದ್ರು. ವಾದ ಪ್ರತಿವಾದ ಆಲಿಸಿದ ಮಾನ್ಯ ನ್ಯಾಯಮೂರ್ತಿ ಎಂ ನಾಗಪ್ರಸನ್ನರವರು ಆದೇಶವನ್ನ ಕಾಯ್ದಿರಿಸಿದ್ದಾರೆ.

Edited By : Nirmala Aralikatti
PublicNext

PublicNext

19/09/2024 01:23 pm

Cinque Terre

113.55 K

Cinque Terre

1

ಸಂಬಂಧಿತ ಸುದ್ದಿ