ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇತಿಹಾಸ ಸೃಷ್ಟಿಸಿದ ಅಶ್ವಿನ್ - ಈ ಸಾಧನೆ ಮಾಡಿದ ವಿಶ್ವದ ಏಕೈಕ ಆಟಗಾರ

ಚೆನ್ನೈ: ಭಾರತ ಮತ್ತು ಬಾಂಗ್ಲಾದೇಶ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವು ಇಂದು (ಸೆಪ್ಟೆಂಬರ್ 19ರಿಂದ) ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಪ್ರಾರಂಭವಾಗಿದೆ. ಈ ಪಂದ್ಯದಲ್ಲಿ ಭಾರತದ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ಇತಿಹಾಸ ಸೃಷ್ಟಿಸಿದ್ದಾರೆ.

ಭಾರತದ ಮೊದಲ ಇನ್ನಿಂಗ್ಸ್‌ನಲ್ಲಿ ಅಶ್ವಿನ್ 108 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಇನ್ನಿಂಗ್ಸ್‌ನಲ್ಲಿ ಅಶ್ವಿನ್ ಅದ್ಭುತ ದಾಖಲೆ ಬರೆದಿದ್ದಾರೆ. ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ 500ಕ್ಕೂ ಹೆಚ್ಚು ವಿಕೆಟ್‌ಗಳನ್ನು ಪಡೆದ ಹಾಗೂ 20 ಸಂದರ್ಭಗಳಲ್ಲಿ 50+ ಸ್ಕೋರ್‌ಗಳನ್ನು ಗಳಿಸಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ 516 ವಿಕೆಟ್ ಪಡೆದಿದ್ದಾರೆ. ಇದಲ್ಲದೆ, ಅವರು 14 ಅರ್ಧ ಶತಕ ಮತ್ತು 6 ಶತಕಗಳನ್ನು ಸಹ ಗಳಿಸಿದ್ದಾರೆ. ಈ ವಿಷಯದಲ್ಲಿ ಟೆಸ್ಟ್‌ನಲ್ಲಿ ಒಟ್ಟು 604 ವಿಕೆಟ್‌ಗಳನ್ನು ಕಬಳಿಸಿದ ಸ್ಟುವರ್ಟ್ ಬ್ರಾಡ್ ನಂತರದ (ಎರಡನೇ) ಸ್ಥಾನದಲ್ಲಿದ್ದಾರೆ. ಅಲ್ಲದೆ 14 ಸಂದರ್ಭಗಳಲ್ಲಿ ಐವತ್ತು ಪ್ಲಸ್ ಸ್ಕೋರ್‌ಗಳನ್ನು ಗಳಿಸಿದ್ದಾರೆ.

Edited By : Vijay Kumar
PublicNext

PublicNext

19/09/2024 05:06 pm

Cinque Terre

30.24 K

Cinque Terre

2

ಸಂಬಂಧಿತ ಸುದ್ದಿ