ಬೆಂಗಳೂರು: ಮಾಜಿ ಸಿಎಂ ಬಿಎಸ್‌ವೈ ಮತ್ತು ಕೇಂದ್ರ ಸಚಿವ ಹೆಚ್‌ಡಿಕೆ ಮೇಲೆ ಡಿನೋಟಿಫಿಕೇಷನ್ ಹಗರಣ ಆರೋಪವನ್ನ ಕಾಂಗ್ರೆಸ್ ಮಾಡಿದೆ. ಇಂದು ಕೆಪಿಸಿಸಿಯಲ್ಲಿ ಸಚಿವರಾದ ಕೃಷ್ಣ ಬೈರೆಗೌಡ, ದಿನೇಶ್ ಗುಂಡೂರಾವ್ ಮತ್ತು ಸಂತೋಷ್ ಲಾಡ್ ಜಂಟಿ ಸುದ್ದಿ ಗೋಷ್ಠಿ ನಡೆಸಿದ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಡಿನೋಟಿಫಿಕೇಷನ್ ಹಗರಣದ ಬಗ್ಗೆ ದಾಖಲೆ ಸಮೇತ ಬಹಿರಂಗ ಮಾಡಿದರು.
ಬೆಂಗಳೂರಿನ ಗಂಗೇನಹಳ್ಳಿಯ ಬಿಡಿಎ ಸೈಟ್ 1 ಎಕರೆ 11 ಗುಂಟೆ ಜಮೀನು ಡಿನೋಟಿಫಿಕೇಷನ್ ಮಾಡಿದ್ದಾರೆ,ಸತ್ತವರ ಹೆಸರಿನಲ್ಲಿ ನೂರಾರು ಕೋಟಿಗೂ ಹೆಚ್ಚು ಬೆಲೆಬಾಳುವ ಆಸ್ತಿಯನ್ನ ಯಡಿಯೂರಪ್ಪನವರ ಕೈಯಲ್ಲಿ ಡಿನೋಟಿಫಿಕೇಷನ್ ಕುಮಾರಸ್ವಾಮಿ ಮಾಡಿದ್ದಾರೆ ಎಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಪಾತ್ರ ಏನು ಇಲ್ಲದಿದ್ದರು ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸುವ ಇವರು ಇವರೇನು ಮಾಡಿದ್ದಾರೆ ನೋಡಿ ಎಂದು ಡಿನೋಟಿಫಿಕೇಷನ್ ಮಾಡಿರುವ ದಾಖಲೆ ಬಿಡುಗಡೆ ಮಾಡಿದ್ದಾರೆ. ಕಾಂಗ್ರೆಸ್ ಮಾಡಿರುವ ಡಿನೋಟಿಫಿಕೇಷನ್ ಆರೋಪಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮತ್ತು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಯಾವ ಪ್ರತಿಕ್ರಿಯೆ ನೀಡ್ತಾರೆ ಕಾದು ನೋಡಬೇಕು.
PublicNext
19/09/2024 06:55 pm