ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಟ್ರಾಸಿಟಿ ಕೇಸ್‌ನಲ್ಲಿ ಮುನಿರತ್ನಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ಆರ್.ಆರ್.ನಗರ ಶಾಸಕ ಮುನಿರತ್ನ ಅವರಿಗೆ ಕೊನೆಗೂ ಷರತ್ತುಬದ್ಧ ಜಾಮೀನು‌ ದೊರೆತಿದೆ.

ಜೀವ ಬೆದರಿಕೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದ ಮುನಿರತ್ನ, ಎರಡನೇ‌ ಪ್ರಕರಣವಾದ ಜಾತಿನಿಂದನೆ ಕೇಸ್‌ನಲ್ಲಿ ಜಾಮೀನು ಪಡೆದುಕೊಳ್ಳುವಲ್ಲಿ ಸಫಲರಾಗಿದ್ದಾರೆ. ಜಾಮೀನು ಆದೇಶವನ್ನು ಇಂದಿಗೆ ಕಾಯ್ದಿರಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಸಂತೋಷ್ ಗಜಾನನ ಭಟ್ ಅವರು ಆದೇಶವನ್ನ ಪ್ರಕಟಿಸಿದರು.

2 ಲಕ್ಷ ಬಾಂಡ್, ಇಬ್ಬರ ಶ್ಯೂರಿಟಿ, ಸಾಕ್ಷ್ಯಾಧಾರ ನಾಶಪಡಿಸಕೂಡದು ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕಿಬಾರದು ಎಂದು ಷರತ್ತುವಿಧಿಸಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದೆ.

ನ್ಯಾಯಲಯದ ಷರತ್ತು ಪೂರೈಸಲು ಇಂದು ನ್ಯಾಯಾಲಯದ ಕಲಾಪ ಅಂತ್ಯ ಹಿನ್ನೆಲೆಯಲ್ಲಿ ನಾಳೆ ಕೋರ್ಟ್‌ಗೆ ಸಲ್ಲಿಕೆ ಸಾಧ್ಯತೆ ಹಿನ್ನೆಲೆಯಲ್ಲಿ ಬಹುತೇಕ ನಾಳೆ ಜೈಲಿನಿಂದ ಮುನಿರತ್ನ ಬಿಡುಗಡೆಯಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

19/09/2024 07:05 pm

Cinque Terre

14.96 K

Cinque Terre

1

ಸಂಬಂಧಿತ ಸುದ್ದಿ