ಬೆಂಗಳೂರು: ಸ್ವಿಫ್ಟ್ ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಮಾತನಾಡಿಸುವ ನೆಪದಲ್ಲಿ 80 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಸಿದು ಗೌರಿಬಿದನೂರಿನತ್ತ ಪರಾರಿಯಾಗಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಗುಂಜೂರು ಗ್ರಾಮದ ನಿವಾಸಿ ಶೈಲಾಜಾ (60 ವರ್ಷ) ಮಾಂಗಲ್ಯ ಸರ ಕಳೆದುಕೊಂಡ ಮಹಿಳೆ, ಇಂದು ಮುಂಜಾನೆ ವಿಳಾಸ ಕೇಳುವ ನೆಪದಲ್ಲಿ ಬಂದ ದುಷ್ಕರ್ಮಿಗಳು ಒಂಟಿ ಮಹಿಳೆಯ ಬಳಿ ಬೆಲೆ ಬಾಳುವ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಡಿವೈಎಸ್ಪಿ ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಹಿಂದೆ ಸರಗಳ್ಳರು ಬೈಕ್‌ನಲ್ಲಿ ಬಂದು ಒಂಟಿ ಮಹಿಳೆಯರ ಸರ ಕದ್ದು ಪರಾರಿಯಾಗುತ್ತಿದ್ದರು. ಆದರೆ ಸರಗಳ್ಳತನ ಶೈಲಿ ಅಪ್‌ಡೆಟ್ ಆಗಿರುವ ಅವರು ಕಾರಿನಲ್ಲಿ ಬಂದು ಒಂಟಿ ಮಹಿಳೆಯರು ಸರ ಕದ್ದು ಪರಾರಿಯಾಗಿದ್ದಾರೆ.
PublicNext
19/09/2024 07:11 pm