ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹೋರಾಟ ಇಂದಿನದಲ್ಲ. ಮೊದಲಿನಿಂದಲೂ ಅಂಗನವಾಡಿ ಕಾರ್ಯಕರ್ತೆಯರು ಹೋರಾಟ ಮಾಡುತ್ತಲೇ ಇದ್ದಾರೆ ಹಾಗೂ ಸರ್ಕಾರ ನಿರ್ಲಕ್ಷ್ಯ ಮಾಡುತ್ತಲೇ ಇದೆ. ಆದರೆ ಇದೀಗ 3 ತಿಂಗಳಿನಿಂದ ಸಂಬಳ ಸಿಗದೇ ಮತ್ತೊಮ್ಮೆ ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.
ಇಂದು, ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಸಾವಿರಾರು ಕಾರ್ಯಕರ್ತೆಯರು ಸೇರಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 3 ತಿಂಗಳ ಸಂಬಳ ನೀಡುವಂತೆ, ಸಂಬಳ ಹೆಚ್ಚಿಸುವಂತೆ , ಗುಣಮಟ್ಟದ ಆಹಾರ ನೀಡುವಂತೆ ಸರ್ಕಾರದ ಮುಂದೆ ಬೇಡಿಕೆಗಳನ್ನು ಇಟ್ಟು ಪ್ರತಿಭಟನೆ ನಡೆಸಿದ್ದಾರೆ.
PublicNext
19/09/2024 07:17 pm