ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಪಬ್ಲಿಕ್ ನೆಕ್ಸ್ಟ್ ಇಂಪ್ಯಾಕ್ಟ್, ಮಂಡಿಗನಾಳ ನೀರಿನ ಘಟಕ ಸ್ವಚ್ಛತೆ !

ಕುಂದಗೋಳ : ಪಬ್ಲಿಕ್ ನೆಕ್ಸ್ಟ್ ವರದಿ ಪ್ರಕಟಿಸಿದ ಒಂದೇ ದಿನದಲ್ಲಿ ಮಂಡಿಗನಾಳ ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕ ಸ್ವಚ್ಛತೆಗೆ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಹೌದು ! ಕುಂದಗೋಳ ತಾಲೂಕಿನ ಗುಡಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಡಿಗನಾಳ ಗ್ರಾಮದ ಸಾರ್ವಜನಿಕ ಶುದ್ಧ ಕುಡಿಯುವ ನೀರಿನ ಘಟಕ ಕೊಳಚೆ ತುಂಬಿ ಅನೈರ್ಮಲ್ಯ ತಾಳಿತ್ತು.

ಈ ಬಗ್ಗೆ ಪಬ್ಲಿಕ್ ನೆಕ್ಸ್ಟ್ ವರದಿ ಬಿತ್ತರಿಸಿ ಅಧಿಕಾರಿಗಳ ಗಮನ ಸೆಳೆದು ಡೆಂಗ್ಯೂ, ಮಲೇರಿಯಾ ರೋಗದಂತಹ ಸಂದರ್ಭ ಶುದ್ಧ ಕುಡಿಯುವ ನೀರಿನ ಘಟಕ ಕೊಳಚೆ ತುಂಬಿದ ಬಗ್ಗೆ ವರದಿ ಮಾಡಿತ್ತು.

ಇದೀಗ ಪಬ್ಲಿಕ್ ನೆಕ್ಸ್ಟ್ ವರದಿ ಪ್ರಕಟ ಮಾಡಿದ ಮರು ದಿನವೇ ಶುದ್ಧ ಕುಡಿಯುವ ನೀರಿನ ಘಟಕ ಸ್ವಚ್ಛತಾ ಕಾರ್ಯವನ್ನು ಅಧಿಕಾರಿಗಳು ಕೈಗೊಂಡು ತಮ್ಮ ಕರ್ತವ್ಯ ನಿಭಾಯಿಸಲಿದ್ದಾರೆ.

ಪಬ್ಲಿಕ್ ನೆಕ್ಸ್ಟ್ ಇಂಪ್ಯಾಕ್ಟ್ : ಶ್ರೀಧರ ಪೂಜಾರ

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

19/09/2024 07:43 pm

Cinque Terre

15.79 K

Cinque Terre

0

ಸಂಬಂಧಿತ ಸುದ್ದಿ