ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: 'ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ' - ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ

ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಇಲಾಖೆ (ಪದವಿ ಪೂರ್ವ) ಹಾಗೂ ಶ್ರೀರಾಮಕೃಷ್ಣ ಪದವಿ ಪೂರ್ವ ಕಾಲೇಜು ಬಂಟ್ಸ್ ಹಾಸ್ಟೆಲ್‌ನ ಸಂಯುಕ್ತ ಆಶ್ರಯದಲ್ಲಿ 'ಸುವರ್ಣ ಕರ್ನಾಟಕ ಸಂಭ್ರಮ 50', "ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ "ಶೀರ್ಷಿಕೆಯಡಿಯಲ್ಲಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಮುಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಾಸುದೇವ ಬೆಳ್ಳೆ ಉದ್ಘಾಟಿಸಿ ಮಾತನಾಡಿದರು. ಶ್ರೀರಾಮಕೃಷ್ಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಯಶೋಧ ಯು ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸ್ಪರ್ಧೆಯಲ್ಲಿ 9 ತಾಲೂಕಿನ ವಿಜೇತ 27 ಸ್ಪರ್ಧಾಳುಗಳು ಭಾಗವಹಿಸಿದ್ದರು. ಉಪನ್ಯಾಸಕಿ ರುಕ್ಮಿಣಿ, ನಟೇಶ್ ಆಳ್ವ, ರೂಪಾ ತೀರ್ಪುಗಾರಾಗಿ ಭಾಗವಹಿಸಿದ್ದರು. ಕಾಲೇಜಿನ ಉಪ ಪ್ರಾಂಶುಪಾಲ ಧನರಾಜ್ ಚಿಪ್ಪಾರ್, ಹಿರಿಯ ಕನ್ನಡ ಉಪನ್ಯಾಸಕಿ ರುಕ್ಮಿಣಿ, ರಾಮಕೃಷ್ಣ ಹೈಸ್ಕೂಲ್ ಉಪ ಪ್ರಾಂಶುಪಾಲೆ ರೂಪ, ಪದವಿ ಕಾಲೇಜಿನ ಉಪನ್ಯಾಸಕ ನಟೇಶ್ ಆಳ್ವ ಮತ್ತಿರರು ಉಪಸ್ಥಿತರಿದ್ದರು.

Edited By : Nagesh Gaonkar
PublicNext

PublicNext

19/09/2024 08:31 pm

Cinque Terre

16.78 K

Cinque Terre

0

ಸಂಬಂಧಿತ ಸುದ್ದಿ