ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಬೈಕ್ ತಪ್ಪಿಸಲು ಹೋದ ಶಾಲಾ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ - ಚಾಲಕನಿಗೆ ಗಂಭೀರ

ಕುಂದಾಪುರ: ಅತೀ ವೇಗದಿಂದ ಚಲಾಯಿಸುತ್ತಿದ್ದ ಶಾಲಾ ವಾಹನವೊಂದು ಬೈಕ್ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತೆಕ್ಕಟ್ಟೆ ಬಸ್ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ವಾಹನದಲ್ಲಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ಶಾಲಾ ವಾಹನ ಇದಾಗಿದ್ದು, ಚಾಲಕನ ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಹೆದ್ದಾರಿಯಲ್ಲಿ ಬೈಕೊಂದನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನ ಹೆದ್ದಾರಿ ಪಕ್ಕದ ಹೈಮಾಸ್ಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಶಾಲಾವಾಹನದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಇಲ್ಲದೇ ಇದ್ದಿದ್ದರಿಂದ ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿದೆ.

ಶಾಲಾ ವಾಹನದಲ್ಲಿ ಚಾಲಕ ಮತ್ತು ಇಬ್ಬರು ವಿದ್ಯಾರ್ಥಿನಿಯರು ಮಾತ್ರವೇ ಇದ್ದರು ಎನ್ನಲಾಗಿದೆ. ವಾಹನ ಬ್ರಹ್ಮಾವರದಿಂದ ಹೆಮ್ಮಾಡಿ ಕಡೆಗೆ ಬರುತ್ತಿದ್ದು, ಹೆದ್ದಾರಿಯಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದ್ದರೂ ಚಾಲಕ ಅದನ್ನು ನಿರ್ಲಕ್ಷಿಸಿ ಅತೀ ವೇಗವಾಗಿ ವಾಹನವನ್ನು ಚಲಾಯಿಸುತ್ತಿದ್ದ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಲ್ಲದೇ ಅತೀ ಹಳೆಯದಾದ ವಾಹನ ಎಂದೂ ಸಾರ್ವಜನಿಕರು ದೂರಿದ್ದು, ಇಂತಹಾ ವಾಹನಗಳಲ್ಲಿ ಅಜಾರೂಕತೆಯಿಂದ ವಾಹನ ಚಲಾಯಿಸುವ ಚಾಲಕರ ಜೊತೆಗೆ ವಿದ್ಯಾರ್ಥಿಗಳನ್ನು ಕಳುಹಿಸುವುದು ಎಷ್ಟು ಸುರಕ್ಷಿತ ಎಂದು ಅಸಮಾಧಾನ ಹೊರಹಾಕಿದ್ದಾರೆ. ಅಪಘಾತಕ್ಕೆ ಸಂಬಂಧಿಸಿ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
PublicNext

PublicNext

19/09/2024 09:28 pm

Cinque Terre

10.05 K

Cinque Terre

0

ಸಂಬಂಧಿತ ಸುದ್ದಿ