ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿನ್ನಿಗೋಳಿ: ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಮುಖ್ಯಾಧಿಕಾರಿ, ಜೂನಿಯರ್ ಇಂಜಿನಿಯರ್

ಮುಲ್ಕಿ: ಕಿನ್ನಿಗೋಳಿ ಪಟ್ಟಣ ಪಂಚಾಯಿತಿಗೆ ಲೋಕಾಯುಕ್ತ ದಾಳಿಯಾಗಿದ್ದು ಗುತ್ತಿಗೆದಾರರಿಂದ ಲಂಚ ಸ್ವೀಕರಿಸುತ್ತಿರುವಾಗ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಹಾಗೂ ಜೂನಿಯರ್ ಇಂಜಿನಿಯರ್ ನಾಗರಾಜ ಸಿಕ್ಕಿಬಿದ್ದಿದ್ದಾರೆ.

ದೂರುದಾರರು ಪಿಡಬ್ಲ್ಯೂಡಿ ಕಾಸ್ಟ್-1 ಗುತ್ತಿಗೆದಾರರರಾಗಿದ್ದು, 2022-23ನೇ ಸಾಲಿನ 15ನೇ ಹಣಕಾಸು ಯೋಜನೆಯಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಸ್ ಕೋಡಿ ಸರಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿ ಕಾಂಟ್ರ್ಯಾಕ್ಟ್ ಕೆಲಸವನ್ನು ನಿರ್ವಹಿಸಿದ್ದರು. ಈ ಹಿನ್ನೆಲೆಯಲ್ಲಿ ಕಾಮಗಾರಿಯ ಹಣ 9,77,154 ರೂ ಮೊತ್ತದ ಬಿಲ್ಲು ಮಂಜೂರಾತಿಯ ಬಗ್ಗೆ ಕಿನ್ನಿಗೊಳಿ ಪಟ್ಟಣ ಪಂಚಾಯತ್‌ನ ಜೂನಿಯ‌ರ್ ಇಂಜಿನಿಯರ್ ನಾಗರಾಜು ಅವರಲ್ಲಿ ವಿಚಾರಿಸಿದಾಗ ಬಿಲ್ ಪಾಸ್ ಮಾಡಲು ತನಗೆ 37,000 ರೂಪಾಯಿ ಲಂಚವನ್ನು ನೀಡುವಂತೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿ ಎಂ.ಆರ್ ಸ್ವಾಮಿರವರಿಗೆ 15,000 ರೂ ಲಂಚವನ್ನು ನೀಡಬೇಕೆಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.

ಈ ನಡುವೆ ಜೂನಿಯರ್ ಇಂಜಿನಿಯರ್ ನಾಗರಾಜು ರವರು ಮುಂಗಡವಾಗಿ 7000 ರೂ ಹಣವನ್ನು ಗುತ್ತಿಗೆದಾರರಿಂದ ಪಡೆದುಕೊಂಡಿದ್ದರು ಎಂದು ದೂರಲಾಗಿದೆ.

ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಹಾಗೂ ಇಂಜಿನಿಯರ್ ಅವರು ಲಂಚ ಕೇಳಿದ ಬಗ್ಗೆ ಗುತ್ತಿಗೆದಾರರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಅದರಂತೆ ಲೋಕಾಯುಕ್ತ ಪೊಲೀಸರು ಕಿನ್ನಿಗೋಳಿ ಪಟ್ಟಣ ಪಂಚಾಯಿತಿಗೆ ದಾಳಿ ನಡೆಸಿ ಆರೋಪಿಗಳಾದ ನಾಗರಾಜು ಅವರು ಗುತ್ತಿಗೆದಾರರಿಂದ 30,000 ರೂಪಾಯಿ ಮತ್ತು ಎಂ.ಆರ್.ಸ್ವಾಮಿ ಅವರು 15,000 ರೂಪಾಯಿ ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎ ನಟರಾಜ, ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ.ಎ, ಸುರೇಶ್ ಕುಮಾರ್ ಪಿ, ಚಂದ್ರಶೇಖರ್ ಕೆ.ಎನ್, ಚಂದ್ರಶೇಖರ್ ಸಿ.ಎಲ್ ಭಾಗವಹಿಸಿದ್ದರು.

Edited By : Vinayak Patil
PublicNext

PublicNext

19/09/2024 10:19 pm

Cinque Terre

9.87 K

Cinque Terre

1

ಸಂಬಂಧಿತ ಸುದ್ದಿ