ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಭಿಮಾನಿಗಳೊಂದಿಗೆ ಚಿತ್ರಮಂದಿರದಲ್ಲಿ ʻಉಪೇಂದ್ರʼ ಸಿನಿಮಾ ವೀಕ್ಷಿಸಿದ ರಿಯಲ್ ಸ್ಟಾರ್

ರಿಯಲ್ ಸ್ಟಾರ್ ಉಪೇಂದ್ರ ಅವರೇ ನಿರ್ದೇಶಿಸಿ ನಟಿಸಿರುವ ʻಯುಐʼ ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಈಗಾಗಲೇ ಟೀಸರ್, ಸಾಂಗ್ಸ್‌ನಿಂದ ಸಿನಿಮಾ ಸಖತ್ ಟ್ರೆಂಡ್ ದಲ್ಲಿದೆ. ಉಪ್ಪಿ ಅವರೇ ನಿರ್ದೇಶಿಸಿ ನಟಿಸಿದ್ದ ‘ಉಪೇಂದ್ರ’ ಸಿನಿಮಾ ರೀ ರಿಲೀಸ್‌ ಆಗಿದೆ. ರೀ ರಿಲೀಸ್‌ ಆಗ್ತಿದ್ದಂತೆ ಮೊದಲ ಶೋನಲ್ಲೇ ಅಭಿಮಾನಿಗಳೊಂದಿಗೆ ಕುಳಿತು ಉಪೇಂದ್ರ ಸಿನಿಮಾ ವೀಕ್ಷಣೆ ಮಾಡಿದ್ದಾರೆ.

ಉಪೇಂದ್ರ ಸಿನಿಮಾಗೆ 25 ವರ್ಷ ಆದ ಹಿನ್ನೆಲೆಯಲ್ಲಿ ಬೆಂಗಳೂರಿನ ನರ್ತಕಿ ಚಿತ್ರಮಂದಿರದಲ್ಲಿ ಸಿನಿಮಾ ರೀ ರಿಲೀಸ್‌ ಆಗಿದೆ. ಬೆಳ್ಳಂಬೆಳ್ಳಗೆ 6 ಗಂಟೆ ಸುಮಾರಿಗೆ ನಟ ಉಪೇಂದ್ರ ಮೊದಲ ಶೋವನ್ನು ಅಭಿಮಾನಿಗಳೊಂದಿಗೆ ಥಿಯೇಟರ್‌ನಲ್ಲಿ ಕುಳಿತು ವೀಕ್ಷಣೆ ಮಾಡಿದ್ದಾರೆ. ಇದರಿಂದ ಉಪ್ಪಿ ಅಭಿಮಾನಿಗಳೂ ಫುಲ್‌ ಖುಷ್‌ ಆಗಿದ್ದಾರೆ. ಉಪ್ಪಿ ಥಿಯೇಟರ್‌ಗೆ ಬರುತ್ತಿದ್ದಂತೆ ಶಿಳ್ಳೆ, ಚಪ್ಪಾಳೆ ಮಳೆಗರೆದಿದ್ದಾರೆ.

ಈ ಬಾರಿ ಉಪ್ಪಿ ಹುಟ್ಟುಹಬ್ಬಕ್ಕೆ ದೊಡ್ಡ ಸರ್‌ಪ್ರೈಸ್ ಅಂದರೆ ʻಉಪೇಂದ್ರʼ ರೀ ರಿಲೀಸ್‌ ಆಗಿರೋದು ಅಭಿಮಾನಿಗಳಲ್ಲಿ ಸಂತೋಷ ಮನೆಮಾತಾಗಿದೆ.

Edited By : Somashekar
PublicNext

PublicNext

20/09/2024 01:09 pm

Cinque Terre

14.32 K

Cinque Terre

0