ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಪ್ಯಾಲೆಸ್ತೀನ್​ಗೆ ಕೇಂದ್ರ ಸರ್ಕಾರವೇ ಬೆಂಬಲ ಸೂಚಿಸಿದೆ', ಹೀಗಿರುವಾಗ ಧ್ವಜ ಹಿಡಿದರೆ ತಪ್ಪಿಲ್ಲ ಎಂದ ಜಮೀರ್

ಬೆಂಗಳೂರು : ಪ್ಯಾಲೆಸ್ತೀನ್ ಧ್ವಜ ಹಿಡಿಯುವುದನ್ನು ಸಚಿವ ಜಮೀರ್ ಅಹ್ಮದ್​ ಖಾನ್ ಸಮರ್ಥನೆ ಮಾಡಿಕೊಂಡಿದ್ದಾರೆ. ಪ್ಯಾಲೆಸ್ತೀನ್​ಗೆ ಕೇಂದ್ರ ಸರ್ಕಾರವೇ ಬೆಂಬಲ ಸೂಚಿಸಿದೆ. ಹೀಗಿರುವಾಗ ಧ್ವಜ ಹಿಡಿದುಕೊಂಡು ಹೋದರೆ ತಪ್ಪೇನು? ಕೇಂದ್ರ ಸರ್ಕಾರ ಪ್ಯಾಲೆಸ್ತೀನ್​ಗೆ ಬೆಂಬಲ ಘೋಷಣೆ ಮಾಡಿರುವ ಕಾರಣವೇ ಧ್ವಜ ಹಿಡಿದಿದ್ದಾರೆ, ಇಲ್ಲಾಂದರೆ ಹಿಡಿಯುತ್ತಿರಲಿಲ್ಲ,ಬೇರೆ ದೇಶದ ಬಗ್ಗೆ ಘೋಷಣೆ ಕೂಗಿದರೆ ಅದು ತಪ್ಪು. ಹಾಗೆ ಮಾಡಿದವರು ದೇಶದ್ರೋಹಿಗಳು. ಅಂಥವರನ್ನು ಗಲ್ಲಿಗೇರಿಸಬೇಕು. ಹಾಗೆಂದು ಧ್ವಜ ಹಿಡಿದರೆ ತಪ್ಪಿಲ್ಲ ಎಂದು ಜಮೀರ್ ಹೇಳಿದ್ದಾರೆ.

ಬಿಜೆಪಿಯವರು ಹಿಂದೂ ಮುಸ್ಲಿಂ ಜಗಳ ತಂದಿಟ್ಟು ಮತ ಕೇಳುತ್ತಾರೆ. ಆದರೆ, ನಾವು ಹಾಗಲ್ಲ. ಮಾಡಿದ ಅಭಿವೃದ್ಧಿ ಕೆಲಸ ಮುಂದಿಟ್ಟುಕೊಂಡು ಮತ ಯಾಚಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಕೆಲ ಮುಸ್ಲಿಂ ಯುವಕರು ಓಡಾಟ ನಡೆಸಿದ್ದ ಬಗ್ಗೆ ವರದಿಯಾಗಿತ್ತು. ಅದೇ ರೀತಿ ಕೋಲಾರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ್ದರು. ಚಿತ್ರದುರ್ಗದಲ್ಲಿಯೂ ಈದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಲಾಗಿತ್ತು.

ಕಲಬುರಗಿ, ಸೆಪ್ಟೆಂಬರ್ ಮಂಡ್ಯದ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ವಿಚಾರದಲ್ಲಿ ಬಿಜೆಪಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್​ ಖಾನ್ ಆರೋಪಿಸಿದ್ದಾರೆ.

Edited By : Abhishek Kamoji
PublicNext

PublicNext

20/09/2024 01:38 pm

Cinque Terre

13.64 K

Cinque Terre

18

ಸಂಬಂಧಿತ ಸುದ್ದಿ